ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ, ಯುವ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ನಗರ ಹೊರವಲಯದ ಅರ್ಕುಳ ಜಂಕ್ಷನ್ ಬಳಿ ಡಿ. 31ರ ಸಂಜೆ ಸಂಭವಿಸಿದೆ.
ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಸಸಿಹಿತ್ಲು ಭಗವತೀ ಯಕ್ಷಗಾನ ಮೇಳದ ಕಲಾವಿದ ಪ್ರವೀತ್ ಕುಮಾರ್ (22) ಮೃತ ದುರ್ದೈವಿ.
ಮೇಳದಲ್ಲಿ ಸ್ತ್ರೀವೇಷಧಾರಿಯಾಗಿದ್ದ ಪ್ರವೀತ್ ಅವರು ಡಿ. 31ರಂದು ಬಜಪೆ ಕಂದಾವರ ಬೈಲಿನಲ್ಲಿ ನಿಗದಿಯಾಗಿದ್ದ ಮೇಳದ ಯಕ್ಷಗಾನಕ್ಕೆ ತೆರಳುತ್ತಿದ್ದರು. ಈ ವೇಳೆ ಅರ್ಕುಳ ಜಂಕ್ಷನ್ ಬಳಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ರಸ್ತೆಗೆ ಬಿದ್ದ ವೇಳೆ ಐಸ್‌ಕ್ರೀಂ ಸಾಗಿಸುತ್ತಿದ್ದ ವಾಹನ ಪ್ರವೀತ್ ಮೇಲೆ ಹರಿದಿದೆ. ಇದರ ಪರಿಣಾಮ ಪ್ರವೀತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಂಗಳೂರು ನಗರ ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…