ಮಂಗಳೂರು : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್ ಅಮಾನತುಗೊಳಿಸಿದ್ದಾರೆ.
ಈ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿಕೊಂಡ ಬೆನ್ನಲ್ಲೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳಿದ್ದ ಕುಲದೀಪ್ ಆರ್ ಜೈನ್ ಇದೀಗ ತಾವು ನುಡಿದಂತೆ ನಡೆದುಕೊಂಡಿದ್ದಾರೆ.
ಘಟನೆಯ ವಿವರ :
ಗಂಡ ಹೆಂಡತಿ ಗಲಾಟೆ ವಿಚಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದಿದ್ದ ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಶ್ರೀಲತಾ ಖಾಸಗಿ ವಾಹನದಲ್ಲಿ ಹೋಗಿ ಪಾರ್ಟಿಯ ಜೊತೆ ಸಂಧಾನ ನಡೆಸುವ ನೆಪದಲ್ಲಿ ವ್ಯವಹಾರ ಕುದುರಿಸಿದ್ದರು.
ಇದನ್ನು ಪ್ರತಿದೂರುದಾರರು ಗಮನಿಸಿ ವಿಡಿಯೋ ಮಾಡುತ್ತಿದ್ದಾಗ ಗಮನಿಸಿದ ಶ್ರೀಲತಾ, ಪಾಂಡೇಶ್ವರ ಠಾಣೆಯಲ್ಲಿ ತನ್ನ ಕರ್ತವ್ಯಕ್ಕೆ ಅಡ್ಡಿ ಎಂದು ದೂರು ದಾಖಲಿಸಿದ್ದರು.ಇದು ನ್ಯಾಯಕ್ಕಾಗಿ ಠಾಣೆ ಮೆಟ್ಟಲೇರಿದ ತಂಡದ ಆಕ್ರೋಶಕ್ಕೆ ಕಾರಣವಾಗಿತ್ತು. ತಮಗಾದ ಅನ್ಯಾಯದ ಬಗ್ಗೆ ಹಾಗೂ ಶ್ರೀಲತಾ ಬೇಡಿಕೆ ಇರಿಸಿದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರನ್ನು ನೀಡಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಡಿಸಿಪಿ ಅಂಶುಕುಮಾರ್ ತನಿಖೆಗೆ ಆದೇಶಿಸಿದ್ದರು.ಕಮಿಷನರ್ ವರ್ಗಾವಣೆಯಾದ ಬಳಿಕ ಅಧಿಕಾರ ಸ್ವೀಕರಿಸಿದ ನೂತನ ಕಮಿಷನರ್ ಕುಲದೀಪ್ ಅವರು ಮೊದಲ ಕೆಲಸವಾಗಿ ಶ್ರೀಲತಾ ಅವರನ್ನು ಅಮಾನತುಗೊಳಿಸಿದ್ದಾರೆ.ಈ ಮೂಲಕ ಇಲಾಖೆ ಒಳಗೂ- ಹೊರಗೂ ಭ್ರಷ್ಟಚಾರ ಸಹಿಸಲ್ಲ ಎಂದು ನೇರಾ ಸಂದೇಶ ರವಾನಿಸಿದ್ದಾರೆ.
ಹೆಡ್ ಕಾನ್‌ಸ್ಟೇಬಲ್ ಶ್ರೀಲತಾ ವಿರುದ್ಧ ಈ ಹಿಂದೆ ಇಂತಹ ಅನೇಕ ಪ್ರಕರಣಗಳಲ್ಲಿ ಸಂಧಾನ ಮಾಡಿ ಹಣ ಮಾಡಿದ ಆರೋಪ ಕೇಳಿ ಬಂದಿತ್ತು. ಪದೇ ಪದೇ ಭ್ರಷ್ಟಾಚಾರ ಆರೋಪಗಳು ಕೇಳಿ ಬರುತ್ತಿದ್ದವು. ಈ ಹಿಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದಾಗ ಗಂಡ ಹಂಡತಿ ಪ್ರಕರಣದಲ್ಲಿ ಇದೇ ರೀತಿ ಗಲಾಟೆ ಆಗಿ ರಾಧಾಂತವಾಗಿತ್ತು. ಬಳಿಕ ಠಾಣೆಯಲ್ಲಿದ್ದ ಸಿಸಿಟಿವಿ ಫೂಟೇಜ್‌ಗಳನ್ನೆಲ್ಲಾ ಶ್ರೀಲತಾ ಡಿಲೀಟ್ ಮಾಡಿಸಿದ್ದರು. ಅಷ್ಟೇ ಅಲ್ಲದೆ ತನ್ನ ಕರ್ತವ್ಯಕ್ಕೆ ಅಡ್ಡಿ ಎಂದು ದೂರುದಾರರ ಮೇಲೆ ಪ್ರಕರಣ ದಾಖಲಿಸಿದ್ದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…