Featured

ಮಂಗಳೂರು : ಭ್ರಷ್ಟಾಚಾರ ಆರೋಪ – ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು – Vishwanews24

ಮಂಗಳೂರು : ಭ್ರಷ್ಟಾಚಾರ ಆರೋಪ – ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು

ಮಂಗಳೂರು : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್‌ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್‌ ಅಮಾನತುಗೊಳಿಸಿದ್ದಾರೆ.

ಈ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್‌ ಆಗಿ ಅಧಿಕಾರ ಸ್ವೀಕರಿಸಿಕೊಂಡ ಬೆನ್ನಲ್ಲೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳಿದ್ದ ಕುಲದೀಪ್‌ ಆರ್ ಜೈನ್‌ ಇದೀಗ ತಾವು ನುಡಿದಂತೆ ನಡೆದುಕೊಂಡಿದ್ದಾರೆ.

ಘಟನೆಯ ವಿವರ :
ಗಂಡ ಹೆಂಡತಿ ಗಲಾಟೆ ವಿಚಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದಿದ್ದ ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಖಾಸಗಿ ವಾಹನದಲ್ಲಿ ಹೋಗಿ ಪಾರ್ಟಿಯ ಜೊತೆ ಸಂಧಾನ ನಡೆಸುವ ನೆಪದಲ್ಲಿ ವ್ಯವಹಾರ ಕುದುರಿಸಿದ್ದರು.

ಇದನ್ನು ಪ್ರತಿದೂರುದಾರರು ಗಮನಿಸಿ ವಿಡಿಯೋ ಮಾಡುತ್ತಿದ್ದಾಗ ಗಮನಿಸಿದ ಶ್ರೀಲತಾ, ಪಾಂಡೇಶ್ವರ ಠಾಣೆಯಲ್ಲಿ ತನ್ನ ಕರ್ತವ್ಯಕ್ಕೆ ಅಡ್ಡಿ ಎಂದು ದೂರು ದಾಖಲಿಸಿದ್ದರು.ಇದು ನ್ಯಾಯಕ್ಕಾಗಿ ಠಾಣೆ ಮೆಟ್ಟಲೇರಿದ ತಂಡದ ಆಕ್ರೋಶಕ್ಕೆ ಕಾರಣವಾಗಿತ್ತು. ತಮಗಾದ ಅನ್ಯಾಯದ ಬಗ್ಗೆ ಹಾಗೂ ಶ್ರೀಲತಾ ಬೇಡಿಕೆ ಇರಿಸಿದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರನ್ನು ನೀಡಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಡಿಸಿಪಿ ಅಂಶುಕುಮಾರ್‌ ತನಿಖೆಗೆ ಆದೇಶಿಸಿದ್ದರು.ಕಮಿಷನರ್‌ ವರ್ಗಾವಣೆಯಾದ ಬಳಿಕ ಅಧಿಕಾರ ಸ್ವೀಕರಿಸಿದ ನೂತನ ಕಮಿಷನರ್‌ ಕುಲದೀಪ್‌ ಅವರು ಮೊದಲ ಕೆಲಸವಾಗಿ ಶ್ರೀಲತಾ ಅವರನ್ನು ಅಮಾನತುಗೊಳಿಸಿದ್ದಾರೆ.ಈ ಮೂಲಕ ಇಲಾಖೆ ಒಳಗೂ- ಹೊರಗೂ ಭ್ರಷ್ಟಚಾರ ಸಹಿಸಲ್ಲ ಎಂದು ನೇರಾ ಸಂದೇಶ ರವಾನಿಸಿದ್ದಾರೆ.

ಹೆಡ್‌ ಕಾನ್‌ಸ್ಟೇಬಲ್‌ ಶ್ರೀಲತಾ ವಿರುದ್ಧ ಈ ಹಿಂದೆ ಇಂತಹ ಅನೇಕ ಪ್ರಕರಣಗಳಲ್ಲಿ ಸಂಧಾನ ಮಾಡಿ ಹಣ ಮಾಡಿದ ಆರೋಪ ಕೇಳಿ ಬಂದಿತ್ತು. ಪದೇ ಪದೇ ಭ್ರಷ್ಟಾಚಾರ ಆರೋಪಗಳು ಕೇಳಿ ಬರುತ್ತಿದ್ದವು. ಈ ಹಿಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದಾಗ ಗಂಡ ಹಂಡತಿ ಪ್ರಕರಣದಲ್ಲಿ ಇದೇ ರೀತಿ ಗಲಾಟೆ ಆಗಿ ರಾಧಾಂತವಾಗಿತ್ತು. ಬಳಿಕ ಠಾಣೆಯಲ್ಲಿದ್ದ ಸಿಸಿಟಿವಿ ಫೂಟೇಜ್‌ಗಳನ್ನೆಲ್ಲಾ ಶ್ರೀಲತಾ ಡಿಲೀಟ್‌ ಮಾಡಿಸಿದ್ದರು. ಅಷ್ಟೇ ಅಲ್ಲದೆ ತನ್ನ ಕರ್ತವ್ಯಕ್ಕೆ ಅಡ್ಡಿ ಎಂದು ದೂರುದಾರರ ಮೇಲೆ ಪ್ರಕರಣ ದಾಖಲಿಸಿದ್ದರು.

 

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago