Featured

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು: ವಿಧಾನಸಭೆಯಲ್ಲಿ ಉಮಾನಾಥ್ ಕೋಟ್ಯಾನ್ -Vishwanews24

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು : ವಿಧಾನಸಭೆಯಲ್ಲಿ ಉಮಾನಾಥ್ ಕೋಟ್ಯಾನ್ -Vishwanews24

ಮಂಗಳೂರು: ”ಅಂತರ್‌ ರಾಷ್ಟ್ರೀಯ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು” ಎಂದು ವಿಧಾನಸಭೆಯಲ್ಲಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಧ್ವನಿ ಎತ್ತಿದ್ದಾರೆ.

”ಈ ನಾಡಿನಲ್ಲಿ ಜನ್ಮತಳೆದು ತಮ್ಮ ಬದುಕು ಮತ್ತು ಸಾಧನೆಯಿಂದ ವೀರ ಪುರುಷರಾದವರು, ದೈವಿಕ ಶಕ್ತಿ ಗಳಿಸಿಕೊಂಡವರು ಅನೇಕರು ಇದ್ದಾರೆ. ಅವರಲ್ಲಿ ವೀರ ಪುರುಷರು ಎನಿಸಿಕೊಂಡು, ತಮ್ಮ ಜನ ಸೇವೆಯಿಂದ, ವೀರಗಾಥೆಯಿಂದ, ಅಸಮಾನ್ಯ ನಡೆನುಡಿಗಳಿಂದ ದೈವತ್ವಕ್ಕೆ ಏರಿದ ಅಮರರಾದವರಲ್ಲಿ ಕೋಟಿ ಚೆನ್ನಯರ ಹೆಸರು ನಿಜವಾಗಿಯು ಎಲ್ಲರಿಗೂ ತಿಳಿದಿದೆ. ವೀರ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು. ವೀರ ಪುರುಷ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂದು ನಾಮಕರಣ ಮಾಡಬೇಕು” ಎಂದು ಶಾಸಕ ಉಮಾನಾಥ್ ಕೋಟ್ಯಾನ್ ವಿಧಾನಸಭೆಯಲ್ಲಿ ಒ‌ತ್ತಾಯಿಸಿದ್ದಾರೆ.

”ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಈಗಾಗಲೇ ಮಂಗಳೂರಿನಲ್ಲಿ ಕೋಟಿ ಚೆನ್ನಯರ ಹೆಸರು ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಪ್ರತಿಭಟನೆ, ರ್‍ಯಾಲಿಗಳನ್ನು ನಡೆಸುತ್ತಿದ್ದಾರೆ. ಸರ್ಕಾರ ಕೂಡಲೇ ಜನಾಭಿಪ್ರಾಯಕ್ಕೆ ಮನ್ನಣೆಯನ್ನು ಕೊಟ್ಟು ವೀರ ಪುರುಷ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂದು ಹೆಸರು ಇಡಬೇಕು” ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

 

Vishwa News 24

Recent Posts

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

1 hour ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

2 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

2 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

2 hours ago

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ -vishwanews24

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…

3 hours ago

ಉಡುಪಿ: ಕೋಡಿ ಬೆಂಗ್ರೆ ಬಳಿ ಬೋಟ್ ಮುಳುಗಡೆ; 6 ಮಂದಿ ಮೀನುಗಾರರ ರಕ್ಷಣೆ -vishwanews24

ಉಡುಪಿ: ಕೋಡಿ ಬೆಂಗ್ರೆ ಬಳಿ ಬೋಟ್ ಮುಳುಗಡೆ; 6 ಮಂದಿ ಮೀನುಗಾರರ ರಕ್ಷಣೆ ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಿಂದ…

3 hours ago