Featured

ಮಂಗಳೂರು: ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ ; ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ಎರಡು ಜೀವ – vishwanews24

ಮಂಗಳೂರು: ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ ; ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ಎರಡು ಜೀವ

ಮಂಗಳೂರು: ಮಗುವಿನೊಂದಿಗೆ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಎರಡು ಜೀವಗಳನ್ನು ಉಳಿಸಿದ್ದಾರೆ.

ಕಾವೂರು ಠಾಣಾ ವ್ಯಾಪ್ತಿಯ ಅಂಬಿಕಾನಗರದ 35 ವರ್ಷದ ನಿವಾಸಿಯೊಬ್ಬರು ತಮ್ಮ ಮಗುವಿನೊಂದಿಗೆ ಮಂಗಳವಾರ ಸಂಜೆ ಪಣಂಬೂರು ಸಮುದ್ರ ತೀರಕ್ಕೆ ಬಂದಿದ್ದರು. ಬಳಿಕ ಮಗುವಿನೊಂದಿಗೆ ‘ನಾವಿಬ್ಬರೂ ಸಾಯೋಣ’ ಎಂದು ಹೇಳುತ್ತಾ ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ತನ್ನ ಅಕ್ಕನಿಗೆ ಕಳುಹಿಸಿದ್ದರು. ಬಳಿಕ ಅವರು ಅದನ್ನು ಪೊಲೀಸರಿಗೆ ಕಳುಹಿಸಿದ್ದರು. ಈ ವಿಡಿಯೋ ಗಮನಿಸಿದ ಬಳಿಕ ಪಣಂಬೂರು ಪೊಲೀಸರು ಬೀಚ್‌ನಲ್ಲಿ ಎಲ್ಲಾ ಕಡೆ ತಂದೆ, ಮಗುವನ್ನು ಹುಡುಕಾಡಿದ್ದಾರೆ. ಆದರೆ ಅಲ್ಲಿ ಅವರು ಸಿಗದಿದ್ದ ಕಾರಣ ಆತನ ಮನೆಯನ್ನು ಹುಡುಕಾಡಿ ಮನೆಯತ್ತ ಬಂದಿದ್ದಾರೆ.

ಪಣಂಬೂರು ಪೊಲೀಸರು ಮನೆಗೆ ಬಂದಾಗ ವ್ಯಕ್ತಿಯು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸುತ್ತಿದ್ದ. ಅದೇ ಸಮಯದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬಾಗಿಲು ಮುರಿದು ಆತ ಹಾಗೂ ಪುತ್ರಿಯನ್ನು ರಕ್ಷಿಸಿದ್ದಾರೆ. ಬಳಿಕ ಇಬ್ಬರನ್ನೂ ಕಾವೂರು ಠಾಣೆಯ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ಆತನಿಗೆ ತಿಳಿಹೇಳಿ ಮನೆಗೆ ಕಳುಹಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರ ಮಾಹಿತಿ: ಘಟನೆ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ”ವಿಡಿಯೋ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರ ತಂಡವು ಎಲ್ಲಾ ಬೀಚ್ ಮತ್ತು ಎಲ್ಲಾ ಸ್ಥಳಗಳಲ್ಲಿ ಇವರನ್ನು ಹುಡುಕುವಲ್ಲಿ ನಿರತವಾಗಿತ್ತು. ಪೊಲೀಸರು ಅವರನ್ನು ರಕ್ಷಿಸಲು ಸಮಯಕ್ಕೆ ಸರಿಯಾಗಿ ಬೀಚ್​ನತ್ತ ಬಂದಿದ್ದರಿಂದ ಅವನು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತೋರುತ್ತದೆ. ಆ ಸ್ಥಳದಿಂದ ಆತ ಹೊರಟುಹೋಗಿದ್ದ. ನಂತರ ಪೊಲೀಸರು ಮನೆಗೆ ಹೋಗಿದ್ದಾರೆ. ಮನೆಯಲ್ಲಿ ಆತ್ಮಹತ್ಯೆ ಮುಂದಾಗಿರುವ ಸಂದರ್ಭದಲ್ಲಿ ಪೊಲೀಸರು ತಡೆದರು” ಎಂದು ತಿಳಿಸಿದ್ದಾರೆ.

 

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

13 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

14 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

14 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

14 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

15 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

15 hours ago