ಮಂಗಳೂರು: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನವೊಂದು ಪತ್ತೆಯಾಗಿದ್ದು, ತುಳುನಾಡಿನ ಕಾರ್ಣಿಕ ದೈವದ ಇರುವಿಕೆ ಕಂಡು ಗ್ರಾಮಸ್ಥರು ಬೆಚ್ಚಿಬೀಳುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ನೀರುಮಾರ್ಗದ ಪೆದಮಲೆ ಗ್ರಾಮದಲ್ಲೊಂದು ಅಚ್ಚರಿಯ ವಿದ್ಯಮಾನ ನಡೆದಿದ್ದು, ದೈವದ ಮುನಿಸಿನಿಂದ ತೊಂದರೆಗೀಡಾದ ಗ್ರಾಮಸ್ಥರಿಗೆ ಪ್ರಶ್ನಾಚಿಂತನೆಯಲ್ಲಿ ದೈವಸ್ಥಾನದ ಸುಳಿವು ದೊರೆತಿದೆ.
300 ವರ್ಷಗಳಿಂದ ದೈವಸ್ಥಾನ ಗ್ರಾಮದ ಜನರ ಅರಿವಿಗೆ ಬಾರದೇ ಮಣ್ಣಿನಡಿ ಹುದುಗಿತ್ತು. ಪಾಳು ಬಿದ್ದು ಪೊದೆಗಳಿಂದ ಅವೃತ್ತವಾಗಿದ್ದ ದಟ್ಟ ನಿರ್ಜನ ಪ್ರದೇಶದಲ್ಲಿ ಗ್ರಾಮದ ಇಂದಿನ ಪೀಳಿಗೆಗೆ ದೈವಸ್ಥಾನ ಇದ್ದ ಬಗ್ಗೆ ಅರಿವೇ ಇರಲಿಲ್ಲ. ಆದರೆ, ಇದೀಗ ವಾಜಿಲ್ಲಾಯ-ಧೂಮವತಿ ದೈವದ ಕಾರ್ಣಿಕ ಕಂಡು ಗ್ರಾಮಸ್ಥರು ಅಚ್ಚರಿಪಟ್ಟಿದ್ದಾರೆ.
ಗ್ರಾಮದಲ್ಲಿ ಹೆಚ್ಚಿದ್ದ ಸಾವು-ನೋವು
ಗ್ರಾಮದಲ್ಲಿ ಮನೆಗಳಿಗೆ ಆಗಾಗ ನಾಗರಹಾವು ಪ್ರವೇಶಿಸುವುದು, ಆತ್ಮಹತ್ಯೆ, ಸಾವು-ನೋವು ಹೆಚ್ಚಳವಾಗಿತ್ತು. ನಿರಂತರ ನೆಮ್ಮದಿ ಇಲ್ಲದೇ ಹಲವು ಮನೆಯವರು ಗ್ರಾಮವನ್ನೇ ತೊರೆದಿದ್ದರು. ಹೀಗಾಗಿ ಪಾಳು ಬಿದ್ದಿದ್ದ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಗ್ರಾಮಸ್ಥರು ಮುಂದಾಗಿದ್ದರು. ಈ ವೇಳೆ ದೇವಸ್ಥಾನದಲ್ಲಿ ಪ್ರಶ್ನಾಚಿಂತನೆ ನಡೆಸಲಾಗಿತ್ತು. ಅದರಲ್ಲಿ, ವಾಜಿಲ್ಲಾಯ ದೈವಸ್ಥಾನದ ಸುಳಿವು ಪತ್ತೆಯಾಗಿದೆ.
ಪ್ರಶ್ನಾ ಚಿಂತನೆಯಲ್ಲಿ ಸಿಕ್ಕ ಸುಳಿವು
ದೇಗುಲದ ಉತ್ತರ ದಿಕ್ಕಿನ ನಾಗಬನದ ಬಳಿ ವಾಜಿಲ್ಲಾಯ ದೈವಸ್ಥಾನ ಇರುವ ಸುಳಿವುದ ದೊರೆತಿದೆ. ನೂರಾರು ವರ್ಷಗಳ ಹಿಂದೆ ದೈವಾರಾಧನೆ ನಡೆಯುತ್ತಿದ್ದ ಸುಳಿವು ದೊರೆತಿದೆ. ಹೀಗಾಗಿ ನಾಗಬನದ ಸುತ್ತಲಿನ 50 ಸೆಂಟ್ಸ್ ಜಾಗದಲ್ಲಿ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಆಗ ದೈವಸ್ಥಾನದ ಕುರುಹು ಪತ್ತೆಯಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಸಂಪೂರ್ಣ ಶಿಥಿಲಗೊಂಡ ರೀತಿಯಲ್ಲಿ ದೈವಸ್ಥಾನದ ಸುತ್ತುಪೌಳಿ ಹಾಗೂ ಗುಡಿಯ ಪಂಚಾಂಗ ಪತ್ತೆಯಾಗಿದೆ. ಜನಸಂಚಾರವಿಲ್ಲದೆ ಶತಮಾನವೇ ಕಳೆದಿದ್ದ ಖಾಸಗಿ ವ್ಯಕ್ತಿಗಳಿಗೆ ಸೇರಿದ್ದ ಜಾಗ ಅದಾಗಿದೆ. ದೈವಸ್ಥಾನದ ಧ್ವಜ ಸ್ಥಂಭದ ಬುಡವೊಂದರ ದಂಬೆ ಕಲ್ಲು ಕೂಡ ಪತ್ತೆಯಾಗಿದೆ. ಒಂದು ಬದಿ ಕುದುರೆ ಮೇಲೆ ರಾಜನೊಬ್ಬನ ಕೆತ್ತನೆ ಹಾಗೂ ಇನ್ನೊಂದು ಬದಿ ಸೂರ್ಯ ಚಂದ್ರರ ಕೆತ್ತನೆಯ ಕಲ್ಲು ಕಾಣಿಸಿದೆ. ಜೊತೆಗೆ ಮಣ್ಣಿನಡಿ ಗಂಟೆ ಸೇರಿದಂತೆ ಹಲವು ದೈವಾರಾಧನೆ ಪರಿಕರಗಳು ಪತ್ತೆಯಾಗಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…