ಮಂಗಳೂರು : ಮಣ್ಣು ಕುಸಿತ ಪ್ರಕರಣ – ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಘೋಷಣೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಮಣ್ಣು ಕುಸಿತ ಪ್ರಕರಣ – ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಘೋಷಣೆ

ಮಂಗಳೂರು: ಮಂಗಳೂರು ಮಣ್ಣು ಕುಸಿತ ಪ್ರಕರಣ ಸಂಬಂಧ ಗುತ್ತಿಗೆದಾರ ಸೇರಿ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ನಡುವೆ ಘಟನೆಯಲ್ಲಿ ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ.

ಜಿಲ್ಲಾಡಳಿತದ ಮುತುವರ್ಜಿಯಿಂದ ಗುರುವಾರವೇ ಮಂಡಳಿ ಮೃತ ಕಾರ್ಮಿಕರ ಪತ್ನಿ ಕಿರಣ ದೇವಿ ಅವರಿಗೆ ಪರಿಹಾರದ ಚೆಕ್ ನೀಡಿದ್ದು, ಕಟ್ಟಡ ನಿರ್ಮಾಣದ ಗುತ್ತಿಗೆದಾರರೂ ಎರಡು ಲಕ್ಷ ರೂ. ಪರಿಹಾರ ಹಾಗೂ ಕಾರ್ಮಿಕ ಪರಿಹಾರ ಕಾಯಿದೆಯಡಿಯಲ್ಲಿಯೂ ಕಾರ್ಮಿಕರ ಕುಟುಂಬಕ್ಕೆ ವಿಮಾ ಮೊತ್ತ ದೊರಕಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕುಂದಾಪುರ: ರಸ್ತೆ ಮಧ್ಯೆಯೇ ಪಲ್ಟಿಯಾದ ಸಕ್ಕರೆ ಸಾಗಾಟದ ಲಾರಿ ; ಚಾಲಕ ಅಪಾಯದಿಂದ ಪಾರು – vishwanews24

Leave a Reply