ಮಂಗಳೂರು ಮಣ್ಣು ಕುಸಿತ ಪ್ರಕರಣ : ನಾಲ್ವರ ಮೇಲೆ ಎಫ್ಐಆರ್ – vishwanews24
ಮಂಗಳೂರು ಮಣ್ಣು ಕುಸಿತ ಪ್ರಕರಣ – ನಾಲ್ವರ ಮೇಲೆ ಎಫ್ಐಆರ್ ; ಕಟ್ಟಡ ಪರವಾನಗಿ ಅಮಾನತು
ಮಂಗಳೂರು : ಬಲ್ಮಠದಲ್ಲಿ ಉದ್ಯಮಿ ರೋಹನ್ ಮೊಂತೆರೊ ಅವರ ಮಾಲಕತ್ವದಲ್ಲಿ ನಿರ್ಮಾಣವಾಗುತ್ತಿದ್ದ ರೋಹನ್ ಸ್ಯೂಟ್ಸ್ ಕಮರ್ಷಿಯಲ್ ಆ್ಯಂಡ್ ಫುಲ್ಲಿ ಫರ್ನಿಷ್ಡ್ ಸ್ಟುಡಿಯೊ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಕಾರ್ಮಿಕ ಸಾವನಪ್ಪಿದ್ದು. ಈ ದುರ್ಘಟನೆ ಸಂಬಂಧ ಕಾಮಗಾರಿಯ ಗುತ್ತಿಗೆದಾರ ಹಾಗೂ ಮೂವರು ಮೇಲ್ವಿಚಾರಕರು ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ನಗರ ಪೂರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸೌಜನ್ಯಾ ಕೊಲೆ ಪ್ರಕರಣ: ಮರು ತನಿಖೆ ಮನವಿಗಳ ಆದೇಶ ಕಾಯ್ದಿರಿಸಿದ ಹೈಕೋರ್ಟ್ – vishwanews24
ದುರ್ಘಟನೆ ನಡೆದ ಸ್ಥಳದಲ್ಲಿ 5282.79 ಚ.ಮೀ ವಿಸ್ತೀರ್ಣದ ಕಟ್ಟಡ ನಿರ್ಮಿಸಲು ರೋಹನ್ ಮೊಂತೆರೊ ಅವರು ಪಾಲಿಕೆಯಿಂದ 2024ರ ಮೇ 30ರಂದು ಪರವಾನಗಿ ಪಡೆದಿದ್ದರು. ಮಳೆಗಾಲದಲ್ಲಿ ನೆಲಮಟ್ಟದಿಂದ ಆಳಕ್ಕೆ ಅಗೆದು ಯಾವುದೇ ಕಾಮಗಾರಿ ನಡೆಸಬಾರದು ಎಂದು ಪಾಲಿಕೆ ಸೂಚನೆ ನೀಡಿದ್ದರೂ ಇಲ್ಲಿ ಕಾಮಗಾರಿ ನಡೆಸಲಾಗಿದೆ. ಈ ಕಾಮಗಾರಿಯಿಂದಾಗಿಯೇ ಮಣ್ಣು ಕುಸಿತ ಉಂಟಾಗಿದೆ. ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಹಾಗಾಗಿ ಈ ಕಟ್ಟಡ ನಿರ್ಮಾಣಕ್ಕೆ ನೀಡಲಾದ ಪರವಾನಗಿಯನ್ನು ಮುಂದಿನ ಆದೇಶದವರೆಗೆ ಅಮಾನತು ಮಾಡಲಾಗಿದೆ’ ಎಂದು ಪಾಲಿಕೆ ಆಯುಕ್ತರು ಆದೇಶ ಮಾಡಿದ್ದಾರೆ. ‘ಈ ಕಟ್ಟಡದ ಕಾಮಗಾರಿಯನ್ನು ಮುಂದುವರಿಸಬಾರದು. ಕಾಮಗಾರಿಯ ಸ್ಥಳದಲ್ಲಿ ಬಂದೋಬಸ್ತ್ ಕೈಗೊಳ್ಳಬೇಕು. ಸ್ಥಳಕ್ಕೆ ಯಾರೂ ಪ್ರವೇಶಿಸದಂತೆ ನೊಡಿಕೊಳ್ಳಬೇಕು’ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಮುಡಾ ಹಗರಣ : ಮೈಸೂರು ಡಿಸಿ ಡಾ.ಕೆ.ವಿ ರಾಜೇಂದ್ರ ದಿಢೀರ್ ವರ್ಗಾವಣೆ ; ಏನಿದು ಹಗರಣ ? vishwanews24
