ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮತ್ತೆ ನಳಿನ್ ಕಟೀಲ್ ಅಭ್ಯರ್ಥಿ ಎಂಬರ್ಥದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿರುವುದು ದಕ್ಷಿಣ ಕನ್ನಡದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ.
ಮಂಗಳೂರಿನಲ್ಲಿ ನಡೆದಂತಹ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ರನ್ನ ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಸಂಸದ, ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷರ ಪರವಾಗಿ ವಿಜಯೇಂದ್ರ ಬ್ಯಾಟಿಂಗ್ ಮಾಡಿದ್ದಾರೆ.
ಕಳೆದ ಬಾರಿಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಬಿಜೆಪಿ ವಲಯದಲ್ಲೇ ನಳಿನ್ ಕುಮಾರ್ ಕಟೀಲ್ ಅಭ್ಯರ್ಥಿ ಸ್ಥಾನಕ್ಕೆ ಭಾರೀ ಪರ-ವಿರೋಧಗಳು ಕೇಳಿ ಬಂದಿತ್ತು. ಈ ಬಾರಿಯಾದರೂ ಅಭ್ಯರ್ಥಿಯನ್ನು ಬದಲಿಸಲೇಬೇಕೆಂದು ಬಿಜೆಪಿಯೊಳಗೆ ಅಸಮಧಾನದ ಮಾತುಗಳು ಕೇಳಿ ಬರುತ್ತಿದೆ. ಸದ್ಯ ಭಾರೀ ಗೊಂದಲದ ಗೂಡಾಗಿರುವ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಇಂದು ರಾಜ್ಯಾಧ್ಯಕ್ಷರ ಮಾತು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಭಾರೀ ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…