ಮಂಗಳೂರು,: ದಾಂಪತ್ಯ ಜೀವನ ಪ್ರವೇಶಿಸಿ ಕೆಲ ಗಂಟೆಗಳೇ ಕಳೆಯುವ ಮುಂಚೆಯೇ ಮದುಮಗಳು ಹೃದಯಾಘಾತದಿಂದ ಮೃತಪಟ್ಟ ಘಟನೆ ನಗರದ ಅಡ್ಯಾರ್ ನಲ್ಲಿ ಮಾ.1 ರ ಸೋಮವಾರ ಮುಂಜಾನೆ ನಡೆದಿದೆ.
ಮೃತ ನವವಿವಾಹಿತೆಯನ್ನು ಅಡ್ಯಾರ್ ಕಣ್ಣೂರು ಸಮೀಪದ ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್‌ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ(23) ಎಂದು ಗುರುತಿಸಲಾಗಿದೆ.
ಆಫಿಯಾ ಅವರ ವಿವಾಹವೂ ಭಾನುವಾರ ಕಣ್ಣೂರಿನ ಯುವಕ ಮುಬಾರಕ್ ಎಂಬವರೊಂದಿಗೆ ಅಡ್ಯಾರ್ ಕಣ್ಣೂರು ಜುಮಾ ಮಸೀದಿಯಲ್ಲಿ ನೆರವೇರಿತ್ತು. ಆ ಬಳಿಕ ವಿವಾಹದ ಔತಣಕೂಟವೂ ಅಡ್ಯಾರ್ ಗಾರ್ಡನ್‌ನಲ್ಲಿ ಏರ್ಪಡಿಸಲಾಗಿತ್ತು.
ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ ಮೋದಿ , ಎಲ್ಲರೂ ಲಸಿಕೆ ತೆಗೆದುಕೊಳ್ಳುವಂತೆ ಮನವಿ -Vishwanews24
ಇದಾದ ಬಳಿಕ ಮದುಮಗ ಮುಬಾರಕ್ ಅತ್ತೆಯ ಮನೆಗೆ ಬಂದಿದ್ದರು. ನವಜೋಡಿಯು ವಿವಾಹದ ಸಂಭ್ರಮದಲ್ಲಿದ್ದು, ಸೋಮವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಲೈಲಾ ಆಫಿಯಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಇದೀಗ ವಿವಾಹದ ಸಂಭ್ರಮದಲ್ಲಿದ್ದ ಮನೆಯನ್ನು ನೋವು ಮಡುಗಟ್ಟಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…