ಮಂಗಳೂರು: ಮನೆಯಲ್ಲಿ ಅಕ್ರಮವಾಗಿ ಸಿಲಿಂಡರ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಪ್ರಕರಣ ಭೇದಿಸಿದ ಪೊಲೀಸರು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮನೆಯಲ್ಲಿ ಅಕ್ರಮವಾಗಿ ಸಿಲಿಂಡರ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಪ್ರಕರಣ ಭೇದಿಸಿದ ಪೊಲೀಸರು – Vishwanews24

ಮಂಗಳೂರು: ಮನೆಯಲ್ಲಿ ಅಕ್ರಮವಾಗಿ ಸಿಲಿಂಡರ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಪ್ರಕರಣವನ್ನು ಬಯಲಿಗೆಳೆದಿರುವ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು, 1, 92,000 ಲಕ್ಷ ರೂ. ಮೌಲ್ಯದ ಗ್ಯಾಸ್ ತುಂಬಿಸಲು ಬಳಸುತ್ತಿದ್ದ ಪರಿಕರ ಸೇರಿದಂತೆ ವಿವಿಧ ಕಂಪನಿಗಳ 128 ಸಿಲಿಂಡರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೆರ್ಮನ್ನೂರು ಗಾರಮದ ಚೆಂಬುಗುಡ್ಡ ಎಂಬಲ್ಲಿನ ನಿವಾಸಿ ಫ್ರಾನ್ಸಿಸ್ ಎಂಬವರು ತಮ್ಮ ಮನೆಯ ಬಳಿ ತಗಡು ಶೀಟಿನಿಂದ ನಿರ್ಮಿಸಿದ ಕೋಣೆಯಲ್ಲಿ ಮನೆ ಬಳಕೆ ಸಿಲಿಂಡರ್ ನಿಂದ ಖಾಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗೆ ತಾನೇ ಕೃತಕವಾಗಿ ರೆಗ್ಯುಲೇಟರ್ ಮುಖೇನ ಗ್ಯಾಸ್ ರಿಫಿಲ್ಲಿಂಗ್ ಮಾಡಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು.

ರಾಜ್ಯಸಭೆಯಲ್ಲಿ ಗಾನ ಕೋಗಿಲೆಗೆ ನಮನ: ಮೌನಾಚರಣೆ ಬಳಿಕ 1ಗಂಟೆ ಕಲಾಪ ಮುಂದೂಡಿಕೆ – Vishwanews24

ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸ್ ಠಾಣಾ ಸಂದೀಪ್ ಹಾಗೂ ತಂಡ ಮತ್ತು ಉಳ್ಳಾಲ ವಲಯ ಆಹಾರ ನಿರೀಕ್ಷಕರಾದ ಹ್ಯಾರಿಸ್ ಮತ್ತವರ ತಂಡ ದಾಳಿ ನಡೆಸಿದೆ.

ದಾಳಿ ವೇಳೆ, ಖಾಲಿ ಗ್ಯಾಸ್ ಸಿಲಿಂಡರ್ ನ್ನು ನೆಲದ ಮೇಲೆ ಇರಿಸಿ , ಅದರ ಮೇಲೆ ತುಂಬಿದ ಗ್ಯಾಸ್ ಸಿಲಿಂಡರ್ ನನ್ನು ಕವುಚಿ ಹಾಕಿ ಪೈಪ್ ಮುಖೇನ ಕೃತಕವಾಗಿ ತುಂಬಿಸುತ್ತಿದ್ದು, ಆರೋಪಿ ಪ್ರಾನ್ಸಿಸಿ ಸ್ಥಳದಿಂದ ಓಡಿ ಪರಾರಿಯಾಗಿದ್ದಾನೆ.

ಉಳ್ಳಾಲ ವಲಯ ಆಹಾರ ನಿರೀಕ್ಷಕರು ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಇತರೆ ಜಿಲ್ಲೆಗಳಿಗೂ ವ್ಯಾಪಿಸಿದ ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿ ಬಂದ ವಿಜಯಪುರ ಕಾಲೇಜಿನ ವಿದ್ಯಾರ್ಥಿಗಳು – Vishwanews24

Leave a Reply