ಮಂಗಳೂರು: ಮನೆಯಲ್ಲಿ ಅಕ್ರಮವಾಗಿ ಸಿಲಿಂಡರ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಪ್ರಕರಣವನ್ನು ಬಯಲಿಗೆಳೆದಿರುವ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು, 1, 92,000 ಲಕ್ಷ ರೂ. ಮೌಲ್ಯದ ಗ್ಯಾಸ್ ತುಂಬಿಸಲು ಬಳಸುತ್ತಿದ್ದ ಪರಿಕರ ಸೇರಿದಂತೆ ವಿವಿಧ ಕಂಪನಿಗಳ 128 ಸಿಲಿಂಡರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೆರ್ಮನ್ನೂರು ಗಾರಮದ ಚೆಂಬುಗುಡ್ಡ ಎಂಬಲ್ಲಿನ ನಿವಾಸಿ ಫ್ರಾನ್ಸಿಸ್ ಎಂಬವರು ತಮ್ಮ ಮನೆಯ ಬಳಿ ತಗಡು ಶೀಟಿನಿಂದ ನಿರ್ಮಿಸಿದ ಕೋಣೆಯಲ್ಲಿ ಮನೆ ಬಳಕೆ ಸಿಲಿಂಡರ್ ನಿಂದ ಖಾಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗೆ ತಾನೇ ಕೃತಕವಾಗಿ ರೆಗ್ಯುಲೇಟರ್ ಮುಖೇನ ಗ್ಯಾಸ್ ರಿಫಿಲ್ಲಿಂಗ್ ಮಾಡಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸ್ ಠಾಣಾ ಸಂದೀಪ್ ಹಾಗೂ ತಂಡ ಮತ್ತು ಉಳ್ಳಾಲ ವಲಯ ಆಹಾರ ನಿರೀಕ್ಷಕರಾದ ಹ್ಯಾರಿಸ್ ಮತ್ತವರ ತಂಡ ದಾಳಿ ನಡೆಸಿದೆ.
ದಾಳಿ ವೇಳೆ, ಖಾಲಿ ಗ್ಯಾಸ್ ಸಿಲಿಂಡರ್ ನ್ನು ನೆಲದ ಮೇಲೆ ಇರಿಸಿ , ಅದರ ಮೇಲೆ ತುಂಬಿದ ಗ್ಯಾಸ್ ಸಿಲಿಂಡರ್ ನನ್ನು ಕವುಚಿ ಹಾಕಿ ಪೈಪ್ ಮುಖೇನ ಕೃತಕವಾಗಿ ತುಂಬಿಸುತ್ತಿದ್ದು, ಆರೋಪಿ ಪ್ರಾನ್ಸಿಸಿ ಸ್ಥಳದಿಂದ ಓಡಿ ಪರಾರಿಯಾಗಿದ್ದಾನೆ.
ಉಳ್ಳಾಲ ವಲಯ ಆಹಾರ ನಿರೀಕ್ಷಕರು ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…