Featured

ಮಂಗಳೂರು: ‘ಮರವೂರು ಸೇತುವೆ ದುರಸ್ತಿ ಅಥವಾ ಪುನರ್ ನಿರ್ಮಾಣ ಶೀಘ್ರದಲ್ಲೇ ನಿರ್ಧಾರ’ : ಸಚಿವ ಕೋಟ -Vishwanews24

ಮಂಗಳೂರು: ‘ಮರವೂರು ಸೇತುವೆ ದುರಸ್ತಿ ಅಥವಾ ಪುನರ್ ನಿರ್ಮಾಣ ಶೀಘ್ರದಲ್ಲೇ ನಿರ್ಧಾರ’ : ಸಚಿವ ಕೋಟ -Vishwanews24

ಮಂಗಳೂರು : “ಮರವೂರು ಸೇತುವೆಯ ಮೇಲೆ ಹಾದು ಹೋಗುವ ರಸ್ತೆಯು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಈ ಸೇತುವೆಯ ಪುನರ್ ನಿರ್ಮಾಣ ಮಾಡಬೇಕೆ ಅಥವಾ ದುರಸ್ತಿ ಕೈಗೊಳ್ಳಬೇಕೆ ಎನ್ನುವುದಕ್ಕೆ ತಜ್ಞರನ್ನೊಳಗೊಂಡ ಸಮಿತಿಯು ಪರಿಶೀಲಿಸಿ ಇನ್ನೆರೆಡು ದಿನದೊಳಗೆ ವರದಿ ನೀಡಲಿದೆ. ವರದಿಯನ್ನಾಧರಿಸಿ, ದುರಸ್ತಿ ಅಥವಾ ಪುನರ್ ನಿರ್ಮಾಣದ ಬಗ್ಗೆ ಅಗತ್ಯವಿರುವ ಅನುದಾನವನ್ನು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮರವೂರು ಸೇತುವೆ ಬಿರುಕು ಕಾಣಿಸಿಕೊಂಡಿರುವ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, “ಅತ್ರಾಡಿ ರಾಷ್ಟ್ರೀಯ ಹೆದ್ದಾರಿ-67 ರಸ್ತೆಯಲ್ಲಿರುವ ಮರವೂರು ಸೇತುವೆಯ ಪಿಲ್ಲರ್ 8 ಜೂನ್ 14 ರ ರಾತ್ರಿಯ ಸಮಯದಲ್ಲಿ ಕುಸಿದ ಹಿನ್ನೆಲೆ ಸೇತುವೆಯಲ್ಲಿ ಬಿರುಕು ಕಂಡಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸದರಿ ಸೇತುವೆಯ ಮೇಲೆ ವಾಹನ ಸಂಚಾರ ಯೋಗ್ಯವಲ್ಲದ ಕಾರಣ ಸ್ಥಗಿತಗೊಳಿಸಲಾಗಿದೆ” ಎಂದರು.

“ಈ ರಸ್ತೆಯ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾತಿಯಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸೇತುವೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಮುಂಬರುವ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

“ನಾಲ್ಕು ಪಥದ ರಸ್ತೆಯ ಟೆಂಡರ್‌‌ನಲ್ಲಿ ಹಳೆ ಸೇತುವೆಯನ್ನು ದುರಸ್ಥಿಪಡಿಸಲು ಯೋಜನೆಯನ್ನು ರೂಪಿಸಲಾಯಿತು. ಸೇತುವೆಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸೇತುವೆ ತಪಾಸಣಾ ತಂಡ ಪ್ಲಾನಿಂಗ್ ಆ್ಯಂಡ್ ರೋಡ್ ಆಸ್ಸೆಟ್ ಮ್ಯಾನೇಜ್‍ಮೆಂಟ್ ಸೆಂಟರ್ ವತಿಯಿಂದ ಈಗಾಗಲೇ ಪರಿಶೀಲಿಸಿರುತ್ತಾರೆ. ಹಳೆಯ ಸೇತುವೆ ದುರಸ್ತಿಗೆ 3 ತಿಂಗಳುಗಳ ಕಾಲ ವಾಹನ ಸಂಚಾರ ಸ್ಥಗಿತಗೊಳಿಸಬೇಕಾಗಿರುವುದರಿಂದ ಹೊಸ ಸೇತುವೆ ನಿರ್ಮಾಣಗೊಂಡ ನಂತರವೇ ಹಳೇ ಸೇತುವೆಯ ದುರಸ್ತಿ ಕಾರ್ಯಕೈಗೊಳ್ಳಲು ಉದ್ದೇಶಿಸಲಾಗಿತ್ತು, ಈಗ ತಜ್ಞರ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು” ಎಂದರು.

“ಸೇತುವೆ ಕುಸಿದು ವಾಹನ ಸಂಚಾರ ನಿರ್ಬಂಧಿಸಿದ ಹಿನ್ನೆಲೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ಮಾರ್ಗವಾಗಿ ಉಡುಪಿ ಕಡೆಯಿಂದ ಮುಲ್ಕಿ-ಮೂರುಕಾವೇರಿ-ಕಟೀಲು ಮುಖಾಂತರ, ಬಜ್ಪೆಗೆ ಹಾಗೂ ಮಂಗಳೂರು ಕಡೆಯಿಂದ ಮರವೂರು ದ್ವಾರದಿಂದ ಪೊರ್ಕೋಡಿ-ಜೋಕಟ್ಟೆ – ಬೈಕಂಪಾಡಿ ರಸ್ತೆ ಮತ್ತು ಕೈಕಂಬ – ಅದ್ಯಪಾಡಿ ರಸ್ತೆ ಅಥವಾ ಕೈಕಂಬ – ಬಜಪೆ ರಸ್ತೆ ಮಾರ್ಗವಾಗಿ, ಸುರತ್ಕಲ್ – ಮಂಗಳಪೇಟೆ -ಬಜಪೆ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ” ಎಂದರು.

Vishwa News 24

Recent Posts

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

57 seconds ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

35 minutes ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

50 minutes ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

57 minutes ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 hour ago

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

3 hours ago