ಮಂಗಳೂರು,: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮರವೂರು ಸೇತುವೆ ಹಾನಿಗೊಳಗಾಗಲು ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಮರಳು ಮಾಫಿಯಾವೇ ಪ್ರಮುಖ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದರು.
ಪರ್ಯಾಯ ಸೇತುವೆ ನಿರ್ಮಾಣಕ್ಕೆ ಮುಂದಾಗುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ವಹಿಸಬೇಕಿತ್ತು. ಹಿಂದೆಲ್ಲಾ ಜಿಲ್ಲಾಧಿಕಾರಿಗಳು ತಾಲೂಕು ಕೇಂದ್ರಗಳ ಅತಿಥಿ ಗೃಹಗಳಲ್ಲಿ ಶಿಬಿರ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಳ್ಳುತ್ತಿದ್ದರು. ಅಂತಹ ವ್ಯವಸ್ಥೆ ಈಗ ಇಲ್ಲ ಎಂದು ಹೇಳಿದ ಅಭಯಚಂದ್ರ ಜೈನ್, ಇದೀಗ ಮರವೂರು ಸೇತುವೆಯ ಜತೆಗೆ ಬಹುಗ್ರಾಮ ಕುಡಿಯುವ ನೀರಿಗಾಗಿ ಹಿಂದಿನ ಶಾಸಕರಾದ ವಿಜಯ ಕುಮಾರ್ ಶೆಟ್ಟಿಯವರ ಮುತುವರ್ಜಿಯಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟಿಗೂ ಅಪಾಯವನ್ನು ತಂದೊಡ್ಡಿದೆ. ಜತೆಗೆ ಕೊಂಕಣ ರೈಲ್ವೆಯ ಸೇತುವೆಯೂ ಇಲ್ಲಿ ಹಾದು ಹೋಗುತ್ತಿದ್ದು, ಅದಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜಕಾರಣಿಗಳ ಕೃಪಕಟಾಕ್ಷದಡಿಯಲ್ಲಿ ನಡೆಯುವ ಮರುಳು ಮಾಫಿಯಾದಿಂದ ಇಂತಹ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಣಿಗಾರಿಕೆ ಇಲಾಖೆಯ ಭ್ರಷ್ಟ ಅಧಿಕಾರಿಗಳೂ ಇದಕ್ಕೆ ಕಾರಣ. ನಾನು ಶಾಸಕನಾಗಿದ್ದಾಗ ಇದಕ್ಕೆ ಅವಕಾಶ ನೀಡಿರಲಿಲ್ಲ ಎಂದವರು ಹೇಳಿದರು.
ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ಡ್ರೆಜ್ಜಿಂಗ್ ನೆಪದಲ್ಲಿ ಇಲ್ಲಿ ಪ್ರತಿನಿತ್ಯ ಮರಳುಗಾರಿಕೆ ನಡೆಯುತ್ತಿರುವುದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಿದರು.
ಹೊಸ ಸೇತುವೆ ಕಾಮಗಾರಿ ಸಮರೋಪಾದಿಯಲ್ಲಿ ಮುಗಿಸಬೇಕು. ಹಳೆ ಸೇತುವೆ ಕುಸಿಯಲು ಕಾರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಬೇಕು ಎಂದು ಅವರು ಒತ್ತಾಯಿಸಿದರು.
ರೈಲ್ವೇ ಮಾರ್ಗ ಹಾಗೂ ಸೇತುವೆ ನಡುವೆ ಜೆಸಿಬಿಗಳನ್ನು ಉಪಯೋಗಿಸಿ ಕೆಲಸ ನಡೆಯುತ್ತಿದ್ದ ಸಂದರ್ಭ ಸ್ಥಳೀಯರು ವಿಚಾರಿಸಿದಾಗ ಹೂಳೆತ್ತುವ ಕೆಲಸ ಎಂದು ಗಣಿಗಾರಿಕೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಹೂಳೆತ್ತುವ ಮಣ್ಣನ್ನು ಅಲ್ಲೇ ಸಮೀಪದ ಹೊಂಡಕ್ಕೆ ಹಾಕುವಂತೆ ಸ್ಥಳೀಯರು ಮನವಿ ಮಾಡಿದ್ದೆವು. ಆದರೆ ಅಲ್ಲಿ ಹೂಳೆತ್ತಿದ್ದ ಮಣ್ಣು ಹಾಕಲಾಗಿಲ್ಲ. ಬದಲಾಗಿ ಸುಮಾರು 700 ಲೋಡ್‌ನಷ್ಟು ಮರುಳು ಶೇಖರಣೆಯಾಗಿದೆ ಎಂದು ಸ್ಥಳೀಯರಾದ ಬಾಬು ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಿನಯರಾಜ್, ಶಾಲೆಟ್ ಪಿಂಟೋ, ಅನಿಲ್ ಕುಮಾರ್, ಮೆರಿಲ್ ರೇಗೋ, ಸವದ್ ಸುಳ್ಯ, ಸಿರಾಜ್, ಹನೀಫ್ ಉಪಸ್ಥಿತರಿದ್ದರು.
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…