ಮಂಗಳೂರು: ಚಿಪ್ಪು ಮೀನು ಅಥವಾ ಮರುವಾಯಿ ಸೇವಿಸಿ ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಜಪೆಯ ಕುಪ್ಪೆಪದವು ಪರಿಸರದಲ್ಲಿ ಶನಿವಾರ ನಡೆದಿದೆ.
ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನು ಖರೀದಿಸಿ ಪದಾರ್ಥ ಮಾಡಿ ತಿಂದ ಮೇಲೆ ಕೆಲವರು ಅಸ್ವಸ್ಥಗೊಂಡಿದ್ದು, ಕೋವಿಂಡ್ ಭೀತಿಯಿಂದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳದೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ತೀವ್ರ ಅಸ್ವಸ್ಥಗೊಂಡ ಒಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮರುವಾಯಿ ತಿಂದ ಜನರಲ್ಲಿ ತಲೆ ಸುತ್ತಲಾರಂಭಿಸಿದ್ದು, ಕಣ್ಣು ಮಂಜಾಗಿ, ವಾಂತಿಯೂ ಆಗಿದೆ ಎಂದು ಕೆಲವರು ತಿಳಿಸಿದ್ದಾರೆ.
ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಿರಣ್ ಮಾತನಾಡಿ, ಪುಡ್ ಪಾಯಿಸನ್ ಆಗಿರುವ ಬಗ್ಗೆ ಕೆಲವರು ಮಾಹಿತಿ ನೀಡಿದ್ದಾರೆ.
ಚಿಪ್ಪು ಮೀನಿನ ಪದಾರ್ಥ ಸೇವನೆಯಿಂದ ಅಸ್ವಸ್ಥಗೊಳ್ಳಲು ನಿರ್ದಿಷ್ಟ ಕಾರಣ ಏನು ಎಂದು ಸ್ಪಷ್ಟವಾಗಿಲ್ಲವಾದರೂ ಮೀನು ಕೆಡದಂತೆ ಸಂರಕ್ಷಿಸಲು ಬಳಸುವ ರಾಸಾಯನಿಕದಿಂದಾಗಿ ಅಸ್ವಸ್ಥತೆ ಕಂಡು ಬಂದಿರಬಹುದೆಂದು ಅಸ್ವಸ್ಥಗೊಂಡಿದ್ದ ಕೆಲವರು ಅಭಿಪ್ರಾಯಪಟ್ಟಿದ್ದಾರೆ.
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…