Featured

ಮಂಗಳೂರು : ಮಳಲಿ ದರ್ಗಾ ವಿವಾದ – ಅಷ್ಟಮಂಗಲ ಪ್ರಶ್ನೆಗೆ ಮುಂದಾದ ವಿಹೆಚ್‌ಪಿ – Vishwaews24

ಧಾರ್ಮಿಕ ಸಾಕ್ಷ್ಯ ಪತ್ತೆ ಬಳಿಕ ಐತಿಹಾಸಿಕ ಪುರಾವೆ ಸಂಗ್ರಹಿಸಲು ಯೋಜಿಸಿದ ಹಿಂದೂ ಪರ ಸಂಘಟನೆಗಳು

ಮಂಗಳೂರು: ಮಂಡ್ಯದ ಜಾಮೀಯಾ ಮಸೀದಿ ವಿವಾದದ ಬೆನ್ನಲ್ಲೇ ಮಂಗಳೂರಿನಲ್ಲೂ ಮಸೀದಿಯ ಸತ್ಯಾಸತ್ಯತೆಯ ವಿವಾದವೊಂದು ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ. ಹಿಂದೂ ಪರ ಸಂಘಟನೆಗಳು ಅಷ್ಟಮಂಗಲ ಪ್ರಶ್ನಾ ಚಿಂತನೆ ಮೂಲಕ ಈ ಮಸೀದಿಯ ರಹಸ್ಯ ಪತ್ತೆಗೆ ಮುಂದಾಗಿದೆ. ಧಾರ್ಮಿಕ ಸಾಕ್ಷ್ಯ ಪತ್ತೆ ಬಳಿಕ ಐತಿಹಾಸಿಕ ಪುರಾವೆ ಸಂಗ್ರಹಿಸಲು ಯೋಜಿಸಿದೆ.

ಮಂಗಳೂರು ನಗರ ಹೊರವಲಯದ ಗಂಜಿಮಠದ ಮಳಳಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದಲ್ಲಿ ಇತ್ತೀಚೆಗೆ ದೇವಸ್ಥಾನ ಮಾದರಿಯ ಗುಡಿ ಪತ್ತೆಯಾಗಿತ್ತು. ಈ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಮಸೀದಿಯ ರಹಸ್ಯ ಪತ್ತೆಗೆ ವಿಶ್ವ ಹಿಂದೂ ಪರಿಷತ್ ಮುಂದಾಗಿದೆ. ಅಷ್ಟಮಂಗಲ ಪ್ರಶ್ನೆ ನಡೆಸುವ ನಿರ್ಧಾರವನ್ನು ಮಾಡಿದೆ.

ವಿಶ್ವ ಹಿಂದೂ ಪರಿಷತ್ ಕೇರಳದ ಪ್ರಖ್ಯಾತ ಪುದುವಾಳ್‌ಗಳನ್ನು ಕರೆಸಲಿದ್ದು, ಅವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ ನಡೆಸಿದೆ. ಮಸೀದಿ ಜಾಗದಲ್ಲಿ ದೇವಾಲಯ ಇತ್ತು ಎಂಬುದು ಹಿಂದೂ ಸಂಘಟನೆಗಳ ವಾದವಾಗಿದ್ದು, ಇದನ್ನು ಅಷ್ಟಮಂಗಲ ಪ್ರಶ್ನೆ ಮೂಲಕ ರಹಸ್ಯ ಪತ್ತೆಗಿಳಿದು, ಧಾರ್ಮಿಕ ಸಾಕ್ಷ್ಯ ಪತ್ತೆ ಬಳಿಕ ಐತಿಹಾಸಿಕ ಪುರಾವೆ ಸಂಗ್ರಹಿಸಲು ಪ್ಲಾನ್ ಮಾಡಿದೆ. ಅಷ್ಟಮಂಗಲ ಪ್ರಶ್ನೆ ಬಳಿಕ ದಾಖಲೆ ಸಹಿತ ಕಾನೂನು ಹೋರಾಟಕ್ಕೆ ಯೋಜನೆ ರೂಪಿಸಿದೆ.

ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ದೇವಸ್ಥಾನ ಮಾದರಿಯ ಗುಡಿ ಪತ್ತೆಯಾಗಿತ್ತು. ದರ್ಗಾದ ಹಿಂಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಸಿಕ್ಕಿತ್ತು. ವಿಹೆಚ್‌ಪಿ ಸ್ಥಳಕ್ಕೆ ಭೇಟಿ ನೀಡಿ, ನವೀಕರಣ ಕಾಮಗಾರಿ ಸ್ಥಗಿತಕ್ಕೆ ಕೋರ್ಟ್ ಮೊರೆ ಹೋಗಿದೆ. ಇದರ ಮಧ್ಯೆಯೇ ದೇವರ ಅಸ್ತಿತ್ವದ ಪತ್ತೆಗೆ ಅಷ್ಟಮಂಗಲ ಪ್ರಶ್ನೆಗೆ ಮುಂದಾಗಿದೆ.

ಅಷ್ಟಮಂಗಲ ಪ್ರಶ್ನೆ ಜ್ಯೋತಿಷ್ಯದಲ್ಲಿ ಇದೊಂದು ನಿಗೂಢ ಶಾಸ್ತ್ರವಾಗಿದ್ದು, ದೀರ್ಘ ಕಾಲದ ಸಮಸ್ಯೆಗಳಿಗೆ, ದೇವಳ ವಿಷಯಗಳಿಗೆ, ಗುಪ್ತ ವಿಚಾರ ತಿಳಿಯುವುದಕ್ಕೆ ಮಾತ್ರ ಇದನ್ನು ಬಳಸಲಾಗುತ್ತದೆ. ಹೀಗಾಗಿ ಮಸೀದಿ ರಹಸ್ಯದ ಪತ್ತೆಗೆ ಹಿಂದೂ ಸಂಘಟನೆಗಳು ಅಷ್ಟಮಂಗಲ ಚಿಂತನೆ ನಡೆಸಲು ಮುಂದಾಗಿದೆ. ಮಸೀದಿ ಇರುವ ಜಾಗದ ಸಮೀಪದ ಯಾವುದಾದರೊಂದು ಜಾಗದಲ್ಲಿ ಪ್ರಶ್ನೆಯಿಟ್ಟು ಆ ಜಾಗದ ಸ್ಥಳ ಪುರಾಣ, ಧಾರ್ಮಿಕ ಇತಿಹಾಸಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು ಇದರ ಉದ್ದೇಶ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago