ಮಂಗಳೂರು ಮಳಲಿ ಮಸೀದಿಯಲ್ಲಿ ದೇಗುಲ ಪತ್ತೆ ವಿಚಾರ- ಮಳಲಿ ರಾಮಾಂಜನೇಯ ಮಂದಿರದಲ್ಲಿ ತಂಬೂಲ ಪ್ರಶ್ನೆಗೆ ಕ್ಷಣಗಣನೆ-ಬಿಗಿ ಪೊಲೀಸ್ ಬಂದೋಬಸ್ತು: vishwanews24
ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನ ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ಏಪ್ರಿಲ್ 21ರಂದು ಮಸೀದಿ ನವೀಕರಣದ ವೇಳೆ ಹಿಂದೂ ದೇಗುಲ ಶೈಲಿಯ ಕುರುಹುಗಳು ದೊರೆತಿದ್ದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಇಂದು ತಾಂಬೂಲ ಪ್ರಶ್ನಾ ಚಿಂತನೆಯನ್ನು ಆಯೋಜಿಸಿದೆ.
ಹಿಂದೂಗಳ ಧಾರ್ಮಿಕ ನಂಬುಗೆಯ ಪ್ರಕಾರ, ಪುರಾಣದ ಸತ್ಯಾನುಸತ್ಯತೆಯನ್ನು ಜ್ಯೋತಿಷ್ಯದ ಉನ್ನತ ಸ್ಥಾನದಲ್ಲಿರುವ ಅಷ್ಟಮಂಗಲದಿಂದ ತಿಳಿಯಲು ಸಾಧ್ಯವಿದೆ. ಈ ಅಷ್ಟಮಂಗಲ ಏರ್ಪಡಿಸಿ ಮಳಲಿಯ ಮಸೀದಿಯಲ್ಲಿ ಪತ್ತೆಯಾದ ದೇಗುಲ ಶೈಲಿಯ ಇತಿಹಾಸವನ್ನು ಅರಿಯಲು ಹಿಂದೂ ಸಂಘಟನೆಗಳು ನಿರ್ಧರಿಸಿವೆ. ಅಷ್ಟಮಂಗಲವನ್ನು ಯಾವಾಗ ನಡೆಸಬೇಕು, ಎಲ್ಲಿ ನಡೆಸಬೇಕು, ಯಾವ ದೈವಿಕ ಶಕ್ತಿಯಿದೆ ಎಂಬುದನ್ನು ತಿಳಿಯಲು ತಾಂಬೂಲ ಪ್ರಶ್ನಾ ಚಿಂತನೆಗೆ ನಿರ್ಧರಿಸಲಾಗಿದೆ.
ಮಳಲಿಯ ಮಸೀದಿಯ ಸಮೀಪದಲ್ಲಿರುವ ಶ್ರೀರಾಮಂಜನೇಯ ಭಜನಾ ಮಂದಿರದಲ್ಲಿ ಬೆಳಿಗ್ಗೆ 8 ಗಂಟೆಗೆ ತಾಂಬೂಲ ಪ್ರಶ್ನಾ ಚಿಂತನೆ ನಡೆಯಲಿದೆ.
ಮಂಗಳೂರು ಸೋಮೇಶ್ವರ ಮೂಲದ ಗೋಪಾಲಕೃಷ್ಣ ಪಣಿಕ್ಕರ್ ಪ್ರಶ್ನಾ ಚಿಂತನೆ ನಡೆಯಲಿದೆ.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಾಡಿಸಲಾಗಿದೆ,ಸೆಕ್ಷನ್ 144 ಜಾರಿಯಲ್ಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…