Featured

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಪರ ಸಂಘಟನೆಯಿಂದ ಗಣಹೋಮ – Vishwanews24

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಪರ ಸಂಘಟನೆಯಿಂದ ಗಣಹೋಮ

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ಇತ್ತು ಎನ್ನುವ ವಿಚಾರಕ್ಕೆ ಸಂಬಂಧಿಸಿ ಮಂದಿರ ನಿರ್ಮಾಣ ವಿಚಾರಕ್ಕೆ ಹಿಂದೂ ಪರ ಸಂಘಟನೆ ಇಂದು ಗಣಹೋಮ ನೆರವೇರಿಸಿದೆ. ಗಣಹೋಮದ ಮೂಲಕ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲು ಸಂಕಲ್ಪ ಮಾಡಲಾಗಿದೆ.

ಮಂಗಳೂರು ತಾಲೂಕಿನ ಮಳಲಿ ಪ್ರದೇಶದಲ್ಲಿರುವ ಮಸೀದಿ ಒಳಗಡೆ ಮಂದಿರದ ರಚನೆ ಕಂಡು ಬಂದಿತ್ತು. ಮಸೀದಿ ನವೀಕರಣದ ವೇಳೆ ಮಂದಿರ ರಚನೆಯ ಕುರುಹು, ದೇವಸ್ಥಾನದ ಗರ್ಭ ಗುಡಿಯನ್ನು ಹೋಲುವ ರಚನೆ ಪತ್ತೆಯಾಗಿತ್ತು. ಇದಾದ ಬಳಿಕ ಈ ವಿಚಾರ ವಿವಾದಕ್ಕೆ ಕಾರಣವಾಯಿತು. ನ್ಯಾಯಾಲಯದ ಮೆಟ್ಟಿಲೇರಿತ್ತು. ತಾಂಬೂಲ ಪ್ರಶ್ನೆಯ ಮೊರೆ ಹೋಗಿದ್ದ ಹಿಂದೂ ಸಂಘಟನೆಗಳು, ಕಳೆದ ಮೇ ತಿಂಗಳಿನಲ್ಲಿ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟರು. ಪ್ರಶ್ನೆ ಚಿಂತನೆಯಲ್ಲಿ ಗಣಯಾಗ ನಡೆಸಲು ಸಲಹೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮಳಲಿಯಲ್ಲಿ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಗಣಹೋಮದ ಮೂಲಕ ಮಂದಿರ ನಿರ್ಮಾಣಕ್ಕೆ ದೇವರ ಅನುಗ್ರಹ ಪಡೆಯಲಾಗಿದೆ. ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಗಣಹೋಮ ನಡೆದಿದೆ. ಕಾರ್ಯಕ್ರಮದಲ್ಲಿ ಶಾಸಕ ಭರತ್ ಶೆಟ್ಟಿ, ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್ ಸೇರಿದಂತೆ ಹಲವು ಮಂದಿ ಹಿಂದೂ ಸಂಘಟನೆಗಳ ನಾಯಕರು ಭಾಗಿಯಾಗಿದ್ದರು.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

17 minutes ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

35 minutes ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

2 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

2 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

2 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago