Featured

ಮಂಗಳೂರು : ಮಳಲಿ ಮಸೀದಿ ಜಾಗದಲ್ಲೇ ಮಂದಿರ ನಿರ್ಮಾಣ : ಶರಣ್ ಪಂಪ್ ವೆಲ್ – Vishwanews24

ಮಂಗಳೂರು : ಮಳಲಿ ಮಸೀದಿ ಜಾಗದಲ್ಲೇ ಮಂದಿರ ನಿರ್ಮಾಣ : ಶರಣ್ ಪಂಪ್ ವೆಲ್

ಮಳಲಿ ಮಸೀದಿ ಕುರಿತು ನ್ಯಾಯಾಲಯ ನೀಡಿರುವ ತೀರ್ಪನ್ನುಸ್ವಾಗತಿಸಿದ ವಿಎಚ್ ಪಿ

ಇದು ಹಿಂದೂಗಳ ಭಾವನೆಗೆ ಸಂದಿರುವ ಮೊದಲನೇ ಹಂತದ ಜಯ..

ಮಂಗಳೂರು: ಮಳಲಿ ಮಸೀದಿ ಕುರಿತು ಮಂಗಳೂರು ಜಿಲ್ಲಾ ಮೂರನೇ ಹೆಚ್ಚುವರಿ ನ್ಯಾಯಾಲಯ ನೀಡಿರುವ ತೀರ್ಪನ್ನು ವಿಎಚ್ ಪಿ ಸ್ವಾಗತಿಸುತ್ತದೆ. ಇದು ಹಿಂದೂಗಳ ಭಾವನೆಗೆ ಸಂದಿರುವ ಮೊದಲನೇ ಹಂತದ ಜಯ. ಈ ಮೂಲಕ ನಾವು ಮಂದಿರವಿರುವ ಸ್ಥಳದಲ್ಲಿಯೇ ಭವ್ಯವಾದ ಮಂದಿರ ನಿರ್ಮಾಣವನ್ನು ಮಾಡಲಿದ್ದೇವೆ ಎಂದು ವಿಎಚ್ ಪಿ ಪ್ರಾಂತೀಯ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದರು.

ನಗರದ ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಮಾತನಾಡಿದ ಅವರು, ಇಂದು ನ್ಯಾಯಾಲಯ ಮಸೀದಿ ಆಡಳಿತ ಕಮಿಟಿಯ ಅರ್ಜಿಯನ್ನು ವಜಾ ಮಾಡಿ ವಿಎಚ್ ಪಿ ಅರ್ಜಿಯನ್ನು ಎತ್ತಿ ಹಿಡಿದಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಸಂಪೂರ್ಣವಾಗಿ ಹಿಂದೂಗಳ ಪರ ತೀರ್ಪು ನೀಡಲಿದೆ. ಮಸೀದಿಯ ಕಮಿಟಿಯನ್ನು ಆಗ್ರಹಿಸಿಯೋ, ವಿನಂತಿಸಿಯೋ ಹೋರಾಟದಲ್ಲಿ ಸಂಘರ್ಷವಿಲ್ಲದಂತೆ ಅವರೊಡನೆ ಚರ್ಚಿಸಿ ಇತ್ಯರ್ಥ ಮಾಡಲು ಚಿಂತಿಸಿದ್ದೇವೆ ಎಂದರು.

ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ..

ಮಸೀದಿ ಇರುವ ಸ್ಥಳದಲ್ಲಿ ದೇವಸ್ಥಾನದ ಕುರುಹು ಇದ್ದ ಕಾರಣಕ್ಕೆ ಮಸೀದಿಯ ನವೀಕರಣಕ್ಕೆ ತಡೆ ತಂದಿದೆವು. ಅಲ್ಲಿ 800 ವರ್ಷಗಳ ಹಿಂದೆ ಅಲ್ಲಿ ದೇವಾಲಯ ಇತ್ತು ಎಂಬ ನಂಬಿಕೆ ಇದೆ. ತಾಂಬೂಲ ಪ್ರಶ್ನೆಯಲ್ಲೂ ಅದು ಗೋಚರಿಸಿತ್ತು. ಮುಂದಿನ ದಿನಗಳಲ್ಲಿ ಅಷ್ಟಮಂಗಲ ಪ್ರಶ್ನೆ ಇಟ್ಟು ಮುಂದಿನ ನಿರ್ಧಾರ ಮಾಡುತ್ತೇವೆ ಎಂದರು. ವಿವಾದಿತ ಸ್ಥಳವನ್ನು ಪುರಾತತ್ವ ಇಲಾಖೆಯಿಂದ ಸರ್ವೆ ನಡೆಸಲು ಸಾಕಷ್ಟು ಬಾರಿ ಜಿಲ್ಲಾಡಳಿತವನ್ನು ಕೋರಿದ್ದೇವು. ಆದರೆ ಈವರೆಗೆ ನಮಗೆ ಯಾವ ಸ್ಪಂದನೆಯೂ ‘ ದೊರಕಿಲ್ಲ, ಆದ್ಭರಿಂದ ನೂತನ ಜಿಲ್ಲಾಧಿಕಾರಿಯವರು ಈ ಬಗ್ಗೆ ತಕ್ಷಣ ಪುರಾತತ್ವ ಇಲಾಖೆಯಿಂದ ಸರ್ವೆ ಮಾಡಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಶರಣ್ ಪಂಪ್ ವೆಲ್ ಹೇಳಿದರು.

ಉಡುಪಿ: ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ಗೆ ರಾಷ್ಟ್ರಪತಿ ಪದಕ ಪ್ರದಾನ – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago