ಮಂಗಳೂರು: ನಗರದ ಹೊರವಲಯದ ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಈ ವ್ಯಾಜ್ಯ ವಕ್ಫ್ ಟ್ರಿಬ್ಯುನಲ್ನಲ್ಲಿ ನಡೆಯಬೇಕೋ ಅಥವಾ ಸಿವಿಲ್ ಕೋರ್ಟ್‌ನಲ್ಲಿ ನಡೆಯಬೇಕೋ ಎಂಬ ಬಗ್ಗೆ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ತೀರ್ಪು ನೀಡಿದೆ.
ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿ , ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ , ’ಈ ವ್ಯಾಜ್ಯವನ್ನು ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ’ ತೀರ್ಪು ನೀಡಿದೆ.
ಕಾರ್ಕಳ : ನಿಟ್ಟೆ ಕಲ್ಯಾ ಗ್ರಾಮದ ಮೆಸ್ಕಾಂ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ – Vishwanews24
ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ಈ ಹಿನ್ನಲೆ ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಆದೇಶ ಮಾಡಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಮನವಿ ಮಾಡಿದ್ದವು. ಇದನ್ನು ವಿರೋಧಿಸಿದ್ದ ಮಸೀದಿ ಆಡಳಿತ ಮಂಡಳಿ ಮತ್ತು ಮುಸ್ಲಿಂ ಸಂಘಟನೆಗಳು ಈ ದಾವೆಯ ವಿಚಾರಣೆ ನಡೆಸುವ ಅಧಿಕಾರವು ನ್ಯಾಯಾಯಕ್ಕೆ ಇಲ್ಲ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದ ಅಧಿಸೂಚನೆ ಇರಬೇಕು. ಆದರೆ ಮಳಲಿ ಮಸೀದಿಯ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಇರಲಿಲ್ಲ. ಹೀಗಿರುವಾಗ ಇದನ್ನು ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಅಲ್ಲದೇ ಇದನ್ನ ಸ್ಮಾರಕವೋ ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ಗೆ ಅಧಿಕಾರ ಇಲ್ಲ , ವಕ್ಫ್ ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆ ಮಾಡಬಹುದು ಎಂದು ವಾದ ಮಂಡಿಸಿತ್ತು.
ದೇವಾಲಯ ಶೈಲಿ ಪತ್ತೆಯಾಗಿದ್ದರಿಂದ ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲಿಯೂ ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎ ಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮುಂದಿನ ವಿಚಾರಣೆ 2023 ಜ.8 ರಂದು ನಿಗದಿಯಾಗಿದೆ
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…