ಮಂಗಳೂರು: ಬಿಜೈ ಕೆಎಸ್‌ಆರ್‌ಟಿಸಿ ಬಳಿ ಇರುವ ಮಸಾಜ್ ಸೆಂಟರ್ ಒಂದಕ್ಕೆ ದುಷ್ಕರ್ಮಿಗಳು ಏಕಾ ಏಕಿ ದಾಳಿ ನಡೆಸಿದ್ದು ಸೆಂಟರ್ ನಲ್ಲಿದ್ದ ಉಪಕರಣಗಳನ್ನು ಪುಡಿಮಾಡಿ ಅಟ್ಟಹಾಸ ಮೆರೆದಿದ್ದಾರೆ. ಮಸಾಜ್ ಸೆಂಟರ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ದಾಳಿ ಮಾಡಲಾಗಿದೆ.
ನಾಲ್ಕೈದು ಜನರ ತಂಡವೊಂದು ನಗರದಲ್ಲಿನ ಮಸಾಜ್ ಸೆಂಟರ್ ಒಂದಕ್ಕೆ ದಾಳಿ ಮಾಡಿ ಹೀನಾಯ ಕೃತ್ಯ ಎಸಗಿದ್ದಾರೆ. ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂಬ ಅಂಶ ಇನ್ನೂ ಬೆಳಕಿಗೆ ಬಂದಿಲ್ಲ. ನಗರದಲ್ಲಿನ ಕೆಲ ಪುಂಡರಿಂದ ಈ ಕೃತ್ಯ ಎಸಗಲಾಗಿದ್ದು ದ್ವೇಷದ ಕಾರಣ ದಾಳಿಯಾಗಿರಬಹುದು ಎಂದು ಶಂಕಿಸಲಾಗಿದೆ.
ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ನಗರದಾದ್ಯಂತ ಇರುವ ಮಸಾಜ್ ಸೆಂಟರ್‌ಗಳನ್ನು ಮುಚ್ಚುವಂತೆ ದುಷ್ಕರ್ಮಿಗಳು ಆಗ್ರಹಿಸಿದ್ದಾರೆ. ಮಸಾಜ್ ಸೆಂಟರ್‌ಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…