Featured

ಮಂಗಳೂರು: ಮಸೀದಿ ನವೀಕರಣದ ವೇಳೆ ಪ್ರಾಚೀನ ದೇವಸ್ಥಾನದ ಗುಡಿ ಪತ್ತೆ – Vishwanews24

ಮಂಗಳೂರು: ಮಸೀದಿ ನವೀಕರಣದ ವೇಳೆ ಪ್ರಾಚೀನ ದೇವಸ್ಥಾನದ ಗುಡಿ ಪತ್ತೆ

ಮಸೀದಿ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶಿಲ್ದಾರ್ ಸೂಚನೆ..

ಮಂಗಳೂರು: ನಗರದ ಹೊರವಲಯದ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ಕಾಲದ ದೇವಾಲಯದ ಮಾದರಿಯ ಗುಡಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಮುಖಂಡರ ದೂರಿನನ್ವಯ ಸ್ಥಳಕ್ಕೆ ತಹಶೀಲ್ದಾರ್ ಪುರಂದರ್ ಅವರು ಭೇಟಿಯನ್ನು ಕೊಟ್ಟಿದ್ದಾರೆ.

ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಗಂಜಿಮಠ ಪಂಚಾಯಿತಿಯಲ್ಲಿರುವ ಸರ್ವೇ ನಂ 1/10 ನಲ್ಲಿ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿಯಿದ್ದು, ಇದರ ನವೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಈ ವೇಳೆ ಮಸೀದಿ ಅರ್ಧ ಕಟ್ಟಡ ಕೆಡವಿದಾಗ ಪುರಾತನ ದೇವಸ್ಥಾನ ಪತ್ತೆಯಾಗಿದೆ.

ಕಟ್ಟಡದ ಒಳಗೆ ಮತ್ತು ಹೊರಗಡೆ ನೋಡುವಾಗ ಪ್ರಾಚೀನ ದೇವಸ್ಥಾನದ ಕಟ್ಟಡದ ಶೈಲಿಯಲ್ಲಿ ಕಂಡು ಬರುತ್ತಿವೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಕೊಟ್ಟಿದ್ದು ಎರಡೂ ಸಮುದಾಯಗಳ ಮುಖಂಡರ ಜೊತೆ ಶಾಂತಿ ಮಾತುಕತೆ ನಡೆಸಿದ್ದಾರೆ. ಎರಡೂ ಸಮುದಾಯದ ಮುಖಂಡರು ಅಧಿಕಾರಿಗಳ ಮಾತಿಗೆ ಒಪ್ಪಿಗೆ ಸೂಚಿಸಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.

ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕಲು ಜಿಲ್ಲಾಡಳಿತ ಮುಂದಾಗಿದ್ದು, ಸದ್ಯ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶಿಲ್ದಾರ್ ಸೂಚನೆ ನೀಡಿದ್ದಾರೆ. ಹಿನ್ನಲೆ ಕೆಲಸ ಸ್ಥಗಿತಗೊಳಿಸಿ ಜಿಲ್ಲಾಡಳಿತದ ನಡೆಗೆ ದರ್ಗಾ ಆಡಳಿತ ಸಮ್ಮತಿ ಸೂಚಿಸಿದೆ.

ಸುಮಾರು 800 ವರ್ಷಗಳ ಇತಿಹಾಸ ಈ ಮಳಲಿ ಮಸೀದಿಗಿದ್ದು, ದೇವಸ್ಥಾನ ಶೈಲಿಯ ಕಟ್ಟಡದಲ್ಲಿ ಸದ್ಯ ಮೌಲ್ವಿಗಳ ವಿಶ್ರಾಂತಿ ಸ್ಥಳವಾಗಿ ಮಾರ್ಪಟ್ಟಿದೆ. ಈ ಹಿಂದೆ ಹಿಂದಿನ ಮೌಲ್ವಿಗಳು ಈ ಸ್ಥಳದಲ್ಲೇ ನಮಾಝ್ ಮಾಡುತ್ತಿದ್ದರು, ಹೀಗಾಗಿ ಈ ಕಟ್ಟಡವನ್ನು ಕೆಡದೇ ಹಾಗೆಯೇ ಉಳಿಸಿಕೊಂಡಿದ್ದೇವೆ ಎಂದು ಆಡಳಿತ ಮಂಡಳಿ ತಿಳಿಸಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

5 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

7 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

7 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

7 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

7 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

8 hours ago