ಉಡುಪಿ: ಮಂಗಳೂರು- ಮಸ್ಕತ್ ನಡುವೆ ನೇರ ಸಂಚಾರ ಮಾಡುತ್ತಿದ್ದ ವಿಮಾನ ಸೇವೆ ಯನ್ನು ಪುನಃ ಆರಂಭಿ ಸುವ ನಿಟ್ಟಿನಲ್ಲಿ ಈಗಾಗಲೇ ಏರ್ ಇಂಡಿಯಾ ಸಂಸ್ಥೆ ನಿರ್ಧರಿಸಿದ್ದು ಮಾರ್ಚ್ ತಿಂಗಳಿಂದ ಈ ಸೇವೆ ಆರಂಭವಾಗಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಕಿಂಜರಾಪು ತಿಳಿಸಿದ್ದಾರೆ.
ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಪುನರಾರಂಭಿಸುವ ಬಗ್ಗೆ ಸಂಸದ ಕೋಟ ಶ್ರೀನಿವಾಸಪೂಜಾರಿಯವರು ಕೇಂದ್ರ ವಿಮಾನ ಯಾನ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಇದನ್ನೂ ಓದಿ:
ಸಂಸದರ ಪತ್ರದ ಹಿನ್ನೆಲೆಯಲ್‌ಲ್ಲಿ ಏರ್‌ಇಂಡಿಯಾ ಸಂಸ್ಥೆಯೊಂದಿಗೆ ಸಮಾಲೋಚನೆ ಮಾಡಲಾಗಿದ್ದು ಮಾರ್ಚ್‌ನಿಂದ ವಿಮಾನಯಾನ ಪುನರಾರಂಭಿಸುವ ಕುರಿತು ಸಂಸ್ಥೆಯು ನಿರ್ಣಯ ತೆಗೆದುಕೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕರಾವಳಿ ಜಿಲ್ಲೆಯಿಂದ ಮಸ್ಕತ್ ಹೋಗಿ ನೆಲೆಸಿರುವವರಿಗೆ ಈ ಸೇವೆ ಯಿಂದ ಹೆಚ್ಚಿನ ಅನುಕೂಲವಾಗಲಿದೆ. ಕರಾವಳಿ ಭಾಗದ ಅನೇಕರು ಅರಬ್ ದೇಶಗಳಲ್ಲಿ ಉದ್ಯೋಗ, ಶಿಕ್ಷಣ ಸಹಿತ ನಾನಾ ಉದ್ದೇಶಕ್ಕೆ ನೆಲೆಯಾಗಿದ್ದಾರೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…