Featured

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜನರ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬರದಂತೆ ಬಿಜೆಪಿ ಜವಾಬ್ದಾರಿಯುತ ಆಡಳಿತ ನೀಡಲಿದೆ : ನಳಿನ್ ಕುಮಾರ್ ಕಟೀಲು -Vishwanews24

ಮಂಗಳೂರು : ಬಿಜೆಪಿಯ ಮೇಲೆ ವಿಶ್ವಾಸವಿಟ್ಟು ಮಂಗಳೂರಿನ ಜನತೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ ನೀಡಿದ್ದಾರೆ. ಜನತೆಯ ಆಶಯಕ್ಕೆ ತಕ್ಕಂತೆ ಮುಂದಿನ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜವಾಬ್ದಾರಿಯುತ ಆಡಳಿತ ನೀಡಲಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವಾಗ ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಆಡಳಿತ ಬರಬೇಕು ಎಂಬ ನೆಲೆಯಲ್ಲಿ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಮಂಗಳೂರು ಮಹಾನಗರ ಅಭಿವೃದ್ಧಿಗೆ ಈಗ ಇನ್ನಷ್ಟು ವೇಗ ಸಿಗಲಿದೆ. ಜನರ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬರದಂತೆ ಬಿಜೆಪಿ ಆಡಳಿತ ನಡೆಸಲಿದೆ.

ಕೇಂದ್ರ, ರಾಜ್ಯ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜತೆಗೆ ನಗರದ ಜ್ವಲಂತ ಸಮಸ್ಯೆಗಳಿಗೆ ಬಿಜೆಪಿ ಸ್ಪಂದಿಸಲಿದೆ. ಗೆಲುವು ಸಾಧಿಸಿದ ಪಕ್ಷದ ಎಲ್ಲ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಪಕ್ಷದ ಗೆಲುವಿನ ಅಹರ್ನಿಶಿ ದುಡಿದ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಈ ಸಂದರ್ಭ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

11 minutes ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

29 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago