ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಎರಡನೇ ಅವಧಿಯ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆದಿದ್ದು ಮೇಯರ್ ಆಗಿ ಬಿಜೆಪಿಯ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆಯಾಗಿದ್ದಾರೆ.
ಮೇಯರ್ ಸಾಮಾನ್ಯ ಹಾಗೂ ಉಪ ಮೇಯರ್ ಸಾಮಾನ್ಯ ಮಹಿಳೆ ಮೀಸಲಾತಿಯಿದ್ದು ಮೇಯರ್ ಸ್ಥಾನಕ್ಕೆ ಪ್ರೇಮಾನಂದ ಅವರ ಹೆಸರು ಕೇಳಿಬಂದಿದ್ದರೂ ಕೂಡಾ ಉಪಮೇಯರ್ ಸ್ಥಾನಕ್ಕೆ ಸುಮಾರು 10 ಕ್ಕೂ ಅಧಿಕ ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದರು.
ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ -Vishwanews24
ಮಾರ್ಚ್ 2 ರ ಮಂಗಳವಾರ ಮಧ್ಯಾಹ್ನ ಮತದಾನ ನಡೆದಿದ್ದು ನಿರೀಕ್ಷೆಯಂತೆ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿಯವರು ಆಯ್ಕೆಯಾಗಿದ್ದು ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆಯಾಗಿದ್ದಾರೆ.
ಒಟ್ಟು 64 ಮತಗಳು (60 ಕಾರ್ಪೊರೇಟರ್‌ಗಳು, 2 ಶಾಸಕರು) ಮತಗಳಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಂಎಲ್‌ಸಿ ಬಿ ಎಂ ಫಾರೂಕ್ ಗೈರುಹಾಜರಾಗಿದ್ದರು. ಶಾಸಕ ವೇದವ್ಯಾಸ್ ಕಾಮತ್, ಶಾಸಕ ಭರತ್ ವೈ ಶೆಟ್ಟಿ ಉಪಸ್ಥಿತರಿದ್ದರು. ಎಸ್‌ಡಿಪಿಐನ ಇಬ್ಬರು ತಟಸ್ಥರಾಗಿ ನಿಂತರು. ಚುನಾವಣೆ ನಡೆಸಲು ಚುನಾವಣಾ ಅಧಿಕಾರಿ ಪ್ರಕಾಶ್, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಮನಪಾ ಉಪ ಆಯುಕ್ತ ಸಂತೋಷ್ ಉಪಸ್ಥಿತರಿದ್ದರು.
ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿ ಬಿಜೆಪಿಯ ಪ್ರೇಮಾನಂದ ಶೆಟ್ಟಿ ಅವರು 46 ಮತಗಳನ್ನು ಗಳಿಸಿ ಜಯ ಗಳಿಸಿದ್ದು ಕಾಂಗ್ರೆಸ್‌ನ ಅನಿಲ್ ಕುಮಾರ್ 14 ಮತಗಳನ್ನು ಗಳಿಸಿದರು.
ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ ಬಿಜೆಪಿಯ ಸುಮಂಗಲಾ ರಾವ್ 46 ಮತಗಳನ್ನು ಗಳಿಸಿದರೆ, ಕಾಂಗ್ರೆಸ್‌ನ ಜೆಸಿಂತಾ ಆಲ್ಫ್ರೆಡ್ 14 ಮತಗಳನ್ನು ಗಳಿಸಿದ್ದಾರೆ.
ಟೂಲ್ ಕಿಟ್ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…