ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೂನ್ ನಿಂದ ಸೆಪ್ಟೆಂಬರ್ ವರೆಗೆ ಅತ್ಯಧಿಕ ಮಳೆ ಆಗುವ ಸಾಧ್ಯತೆ ಇರುವುದರಿಂದ ಕಟ್ಟಡಗಳ ಮೂಲಕ ಯಾವುದೇ ರೀತಿಯ ದುರಂತ ಅಥವಾ ಪ್ರಾಣಪಾಯ ಸಂಭವಿಸಿದಲ್ಲಿ ಕಟ್ಟಡದ ಮಾಲೀಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ.
ಶಿಥಿಲಗೊಂಡು ಬೀಳುವ ಸಾಧ್ಯತೆ ಇರುವ ಯಾವುದೇ ಕಟ್ಟಡಗಳನ್ನು ಅಥವಾ ಕಟ್ಟಡದ ಭಾಗಗಳನ್ನು ಸೂಕ್ತ ಮುಂಜಾಗ್ರತಾ ಕ್ರಮವಹಿಸಿ ಅಕ್ಕಪಕ್ಕದ ಆಸ್ತಿಗಳಿಗೆ ಹಾನಿಯಾಗದಂತೆ ತೆರವುಗೊಳಿಸಬೇಕು. ಜೂನ್ 1 ರಿಂದ ಸೆಪ್ಟೆಂಬರ್ ತಿಂಗಳೊಳಗೆ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಯಾವುದೇ ಕಟ್ಟಡ ನಿರ್ಮಾಣ ಅಥವಾ ಅಭಿವೃದ್ಧಿ ಸಂಬಂಧ ನೆಲವನ್ನು ಅಗೆಯಬಾರದು ಹಾಗೂ ಮಳೆಗಾಲ ಮುಗಿದ ನಂತರ ಕಾಮಗಾರಿಯನ್ನು ಪ್ರಾರಂಭಿಸಬೇಕು.
ಗುಡ್ಡವನ್ನು ಅಗೆದು ಜಮೀನನ್ನು ಸಮತಟ್ಟುಗೊಳಿಸಿ, ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…