ಮಂಗಳೂರು: ಮಹಿಳೆಗೆ ಕಿರುಕುಳ ; KSRTC ಬಸ್ ಕಂಡಕ್ಟರ್​ ಬಂಧನ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮಹಿಳೆಗೆ ಕಿರುಕುಳ ; KSRTC ಬಸ್ ಕಂಡಕ್ಟರ್​ ಬಂಧನ

ಮಂಗಳೂರು : ಕೆಎಸ್‌ಆರ್‌ಟಿಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಒಬ್ಬ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಕೊಣಾಜೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ಬಾಗಲಕೋಟೆಯ ಮೂಲದ ಪ್ರದೀಪ್ ಕಾಶಪ್ಪ ನಾಯ್ಕರ್ (35) ಎಂದು ಗುರುತಿಸಲಾಗಿದೆ.ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್ ಬ್ಯಾಂಕ್‌ಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ಪ್ರಯಾಣದ ಸಮಯದಲ್ಲಿ ನಿದ್ದೆಗೆಟ್ಟು ಹೋಗಿದ್ದ ಮಹಿಳೆಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ್ದಾನೆ.

ಸಹ ಪ್ರಯಾಣಿಕನೊಬ್ಬ ಈ ಕೃತ್ಯವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಇದು ವ್ಯಾಪಕ ಗಮನ ಸೆಳೆಯಿತು.

ಈ ಕುರಿತು ಪ್ರತಿಕ್ರಿಯಿಸಿದ ಮಂಗಳೂರು‌ ನಗರ ಪೊಲೀಸ್ ಕಮಿಷನರ್​ ಅನುಪಮ್ ಅಗರ್ವಾಲ್, “ಸಾಮಾಜಿಕ ಮಾಧ್ಯಮದಲ್ಲಿ ಬಸ್ ಕಂಡಕ್ಟರ್‌ವೋರ್ವ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವ ವೀಡಿಯೊಗೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅದರಂತೆ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿ ಪ್ರದೀಪ್ ಕಾಶಪ್ಪ ನಾಯ್ಕರ್​ನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

 

Leave a Reply