ಮಂಗಳೂರು : ಕೆಎಸ್‌ಆರ್‌ಟಿಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಒಬ್ಬ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಕೊಣಾಜೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಬಾಗಲಕೋಟೆಯ ಮೂಲದ ಪ್ರದೀಪ್ ಕಾಶಪ್ಪ ನಾಯ್ಕರ್ (35) ಎಂದು ಗುರುತಿಸಲಾಗಿದೆ.ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್ ಬ್ಯಾಂಕ್‌ಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ಪ್ರಯಾಣದ ಸಮಯದಲ್ಲಿ ನಿದ್ದೆಗೆಟ್ಟು ಹೋಗಿದ್ದ ಮಹಿಳೆಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ್ದಾನೆ.
ಸಹ ಪ್ರಯಾಣಿಕನೊಬ್ಬ ಈ ಕೃತ್ಯವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಇದು ವ್ಯಾಪಕ ಗಮನ ಸೆಳೆಯಿತು.
ಈ ಕುರಿತು ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, “ಸಾಮಾಜಿಕ ಮಾಧ್ಯಮದಲ್ಲಿ ಬಸ್ ಕಂಡಕ್ಟರ್‌ವೋರ್ವ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವ ವೀಡಿಯೊಗೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅದರಂತೆ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿ ಪ್ರದೀಪ್ ಕಾಶಪ್ಪ ನಾಯ್ಕರ್ನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…