ಮಂಗಳೂರು :ಮೂವರು ವಿದ್ಯಾರ್ಥಿಗಳು ಸಹಪಾಠಿ ವಿದ್ಯಾರ್ಥಿನಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಮೂವರು ವಿದ್ಯಾರ್ಥಿಗಳು ಸೇರಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವೈರಲ್ ಆಗಿದೆ.
ಈ ಘಟನೆ ಪುತ್ತೂರಿನ ಅಸುಪಾಸಿನಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಉಪ್ಪಿನಂಗಡಿ ಪ್ರದೇಶದವರು ಎಂದು ಶಂಕೆ ವ್ಯಕ್ತವಾಗಿದೆ. ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿ, ಪ್ರಜ್ಞೆ ಕಳೆದುಕೊಂಡಂತಹ ಸ್ಥಿತಿಯಲ್ಲಿದ್ದ ಸಹಪಾಠಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ದಕ್ಷಿಣ ಕನ್ನಡದ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದ್ದಾರೆ.
ಈ ಪತ್ರಿಕಾ ಪ್ರಕಟನೆ ಹೊರಡಿಸಿರುವ ಎಸ್ಪಿ ಅವರು , “ಓರ್ವ ಹುಡುಗಿ ಜೊತೆ 3 ರಿಂದ 4 ಮಂದಿ ಹುಡುಗರು ಆತ್ಮೀಯ ಕೃತ್ಯದಲ್ಲಿ ತೊಡಗಿರುವ ವೀಡಿಯೊ ಒಂದು ವಾಟ್ಸಾಪ್ ಮೂಲಕ ಪ್ರಸಾರ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಡಿಯೋ ಪ್ರಸಾರ ಮಾಡುವುದು ಹಾಗೂ ಫೋನ್ ಹಾಗೂ ಕಂಪ್ಯೂಟರ್ ನಲ್ಲಿ ಉಳಿಸಿಕೊಳ್ಳುವುದು ಅಪರಾಧ. ಒಂದು ವೇಳೆ ವಿಡಿಯೋ ಪ್ರಸಾರ ಮಾಡಿದರೆ ಅವರನ್ನೇ ಆರೋಪಿಯನ್ನಾಗಿ ಮಾಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…