ಮಂಗಳೂರು: ಬಜಪೆಯ ಪೇಜಾವರ ಮಾಗಣೆಯ ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ದೈವಸ್ಥಾನದ ಧಾರ್ಮಿಕ ವಿಧಿವಿಧಾನಗಳನ್ನು ಪಾಲಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಂದ ಪೂರಕ ಸ್ಪಂದನೆ ದೊರೆತಿರುವ ಹಿನ್ನೆಲೆಯಲ್ಲಿ ಮಾ.18ರಂದು ನಡೆಸಲು ಉದ್ದೇಶಿಸಿದ ಬಜಪೆ-ನೆಲ್ಲಿದಡಿಗುತ್ತು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ.
ಅದರ ಬದಲು ನೆಲ್ಲಿದಡಿ ಗುತ್ತು ಚಾವಡಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ನೆಲ್ಲಿದಡಿ ಉಳಿಸಿ ಹೋರಾಟ ಸಮಿತಿ ತಿಳಿಸಿದೆ.
ಹೋರಾಟ ಸಮಿತಿ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಸದ ಬ್ರಿಜೇಶ್ ಚೌಟ ಅವರು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಈ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿರುವುದರಿಂದ ಪಾದಯಾತ್ರೆಯನ್ನು ಸದ್ಯಕ್ಕೆ ಕೈಬಿಡಲಾಗಿದೆ ಎಂದರು.
ಎಪ್ರಿಲ್‌ನಲ್ಲಿ ಚಾವಡಿ ನೇಮ ನಡೆಯಲಿದ್ದು, ಸುಮಾರು ಒಂದೂವರೆ ಸಾವಿರ ಮಂದಿ ಪಾಲ್ಗೊಳ್ಳುತ್ತಾರೆ ಎಂದರು. ನೆಲ್ಲಿದಡಿಗುತ್ತು ಗಡಿಪ್ರಧಾನರಾದ ಲಕ್ಷ್ಮಣ ಚೌಟ, ಮುಖಂಡರಾದ ಅಶ್ವಿನ್ ಶೆಟ್ಟಿ, ಶರತ್ ಶೆಟ್ಟಿ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…