ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಜನತಾ ದಳ ಮಹಿಳಾ ಘಟಕದ ವತಿಯಿಂದ ಮಾರ್ಚ್ 21 ರಂದು ಮಹಿಳಾ ಸಮಾವೇಶ, ಮಹಿಳಾ ದಿನಾಚರಣೆ ಮತ್ತು ಸಾಮರಸ್ಯ ಸಂಗಮ ಮಂಗಳೂರಲ್ಲಿ ನಡೆಯಲಿದ್ದು ಕಾರ್ಯಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ.
ಮಾರ್ಚ್ 21 ರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ಕದ್ರಿ ಪಾರ್ಕ್ ಸರ್ಕ್ಯೂಟ್ ಹೌಸ್ ಬಳಿ ಇರುವ ಲಯನ್ಸ್ ಅಶೋಕ ಸೇವಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಹಿಳಾ ಘಟಕ ಜಾತ್ಯಾತೀತ ಜನತಾ ದಳದ ರಾಜ್ಯಾಧ್ಯಕ್ಷೆ ಲೀಲಾವತಿ ಆರ್.ಪ್ರಸಾದ್, ಬಿ.ಎಂ. ಫಾರೂಕ್, ರೂತ್ ಮನೋರಮ, ಬಿ.ಬಿ ನಿಂಗಯ್ಯ, ಎಸ್.ಎಲ್ ಭೋಜೇಗೌಡ ಸೇರಿ ಇನ್ನಿತರ ಗಣ್ಯ ಅತಿಥಿಗಳು ಆಗಮಿಸಲಿದ್ದಾರೆ.
ಇನ್ನು ಇದೇ ವೇಳೆ ಕಾರ್ಯಕ್ರಮದಲ್ಲಿ ಪಕ್ಷದಿಂದ ವಿಜೇತರಾದ ಗ್ರಾಮ ಪಂಚಾಯತ್ ಸದಸ್ಯರನ್ನು ಸನ್ಮಾನಿಸಲಾಗುವುದು. ಪತ್ರಿಕಾಗೋಷ್ಠಿಯಲ್ಲಿ ಚೂಡಮಣಿ,ವೀಣಾ ಜಯಂತ ಶೆಟ್ಟಿ, ಶ್ರೀಮಣಿ ಆರ್ ಶೆಟ್ಟಿ, ಕವಿತಾ, ಸುಕನ್ಯಾ ಇನ್ನಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಮಣಿಪಾಲ : MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್ ಈಗ ಕಂಟೇನ್ಮೆಂಟ್ ಜೋನ್ -Vishwanews24
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…