Featured

ಮಂಗಳೂರು: ಮಿದುಳು ನಿಷ್ಕ್ರಿಯ ; ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ – vishwanews24

ಮಿದುಳು ನಿಷ್ಕ್ರಿಯ : ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ

ಮಂಗಳೂರು: ಮಿದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಮಹಿಳೆಯರೊಬ್ಬರ ಅಂಗಾಂಗ ದಾನ ಪ್ರಕ್ರಿಯೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ನಡೆಯಿತು.

ಮಹಿಳೆಯ ಎರಡು ಕಣ್ಣುಗಳನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಹಾಗೂ ಲಿವರ್ ಅನ್ನು ಮೈಸೂರಿಗೆ ಝೀರೊ ಟ್ರಾಫಿಕ್ ನಲ್ಲಿ ಕೊಂಡೊಯ್ಯಲಾಯಿತು.

ಶಿವಮೊಗ್ಗ ರಾಗಿಗುಡ್ಡೆಯ ರೇಖಾ (41) ಎಂಬವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದರು. ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆ ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಜ.6ರಂದು ಕರೆತರಲಾಗಿತ್ತು. ಈ ನಡುವೆ ಅವರ ಮಿದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರಿಗೆ ತಿಳಿಸಿ, ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಲಾಯಿತು ಎಂದು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತಿಳಿಸಿದರು.

ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ 176 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ ನಡೆದಿದೆ. ಎಲ್ಲ ರೀತಿಯ ಪರೀಕ್ಷೆಗಳನ್ನು ಪೂರ್ಣಗೊಳಿಸಿ, ಮಿದುಳು ನಿಷ್ಕ್ರಿಯಗೊಂಡಿರುವುದನ್ನು ಖಚಿತ ಪಡಿಸಿಕೊಂಡು ಮುಂದಿನ ಪ್ರಕ್ರಿಯೆ ನಡೆಸಲಾಯಿತು ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಮಾಹಿತಿ ನೀಡಿದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago