Featured

ಮಂಗಳೂರು : ಮೀನಿನಂಗಡಿಗೆ ತಂದಿದ್ದ ರೀಫ್ ಕೋಡ್ ಫಿಶ್ ಹೊಟ್ಟೆಯಲ್ಲಿ ಬರೋಬ್ಬರಿ 10 ಕೆ.ಜಿ.ಯಷ್ಟು ಪ್ಲಾಸ್ಟಿಕ್ ತ್ಯಾಜ್ಯ ಪತ್ತೆ ! -Vishwanews24

ಮಂಗಳೂರು : ಮೀನಿನಂಗಡಿಗೆ ತಂದಿದ್ದ ರೀಫ್ ಕೋಡ್ ಫಿಶ್ ಹೊಟ್ಟೆಯಲ್ಲಿ ಬರೋಬ್ಬರಿ 10 ಕೆ.ಜಿ.ಯಷ್ಟು ಪ್ಲಾಸ್ಟಿಕ್ ತ್ಯಾಜ್ಯ ಪತ್ತೆ -Vishwanews24

ಮಂಗಳೂರು : ಮೀನಿನಂಗಡಿಗೆ ತಂದಿದ್ದ ರೀಫ್ ಕೋಡ್ ಫಿಶ್ ಹೊಟ್ಟೆಯಲ್ಲಿ ಬರೋಬ್ಬರಿ 10 ಕೆ.ಜಿ.ಯಷ್ಟು ಪ್ಲಾಸ್ಟಿಕ್ ತ್ಯಾಜ್ಯ ಪತ್ತೆಯಾಗಿದೆ.

ಮೀನನ್ನು ಸ್ವಚ್ಛಗೊಳಿಸುವಾಗ ಹೊಟ್ಟೆಯಲ್ಲಿದ್ದ ಪ್ಲಾಸ್ಟಿಕ್ ಮಿಶ್ರಿತ ತ್ಯಾಜ್ಯಗಳನ್ನು ಅಂಗಡಿ ಕೆಲಸಗಾರ ಹೊರ ತೆಗೆದಿದ್ದಾರೆ. ಮೀನಿನ ಹೊಟ್ಟೆಯಲ್ಲಿದ್ದ ಪ್ಲಾಸ್ಟಿಕ್ ಚೀಲ ನೋಡಿ ಅಂಗಡಿ ಮಾಲೀಕ ಆಘಾತಗೊಂಡಿದ್ದು, ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಸಮುದ್ರಕ್ಕೆ ಕಸ ಎಸೆಯುವುದರಿಂದಾಗುವ ಪರಿಣಾಮವೇನು ಎಂಬುದನ್ನು ತೋರಿಸಲು ವೀಡಿಯೋ ಮಾಡಿರುವುದಾಗಿ ಅಂಗಡಿ ಮಾಲೀಕ ವಿವರಿಸಿದ್ದಾರೆ.

ಇದನ್ನೂ ಓದಿ : ಉಡುಪಿ :ಜಿಲ್ಲೆಯಲ್ಲಿ 10117.28 ಕೋಟಿ ಸಾಲ ನೀಡಿಕೆ ಗುರಿ : ಡಾ. ನವೀನ್ ಭಟ್ -Vishwanews24

ಇಂತಹ ಘಟನೆಯನ್ನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ಇದೇ ರೀತಿ ಸಮುದ್ರಕ್ಕೆ ಪ್ಲಾಸ್ಟಿಕ್ ಎಸೆಯುವುದನ್ನು ಮುಂದುವರಿಸಿದರೆ ಮೀನುಗಳ ಸಂತಾನೋತ್ಪತ್ತಿ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಅವರು ತಿಳಿಸಿದ್ದಾರೆ.

ಮೀನುಗಳು ಸಾಮಾನ್ಯವಾಗಿ ಪ್ಲಾಸ್ಟಿಕ್ ತಿನ್ನುವುದಿಲ್ಲ. ಆಹಾರದ ವಿಚಾರದಲ್ಲಿ ಮೀನುಗಳು ತುಂಬಾ ಸೂಕ್ಷ್ಮವಾಗಿರುತ್ತವೆ. ಏನು ತಿನ್ನಬೇಕು ಎಂಬುದು ಅವುಗಳಿಗೆ ತಿಳಿದಿದೆ. ಸಮುದ್ರದ ತಳಭಾಗದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ತುಂಬಿರಬಹುದು. ಇದನ್ನೇ ಮೀನು ತಿಂದಿರಬಹುದು ಎಂದು ಮೀನುಗಾರಿಕಾ ಕಾಲೇಜಿನ ಪ್ರಾಧ್ಯಾಪಕ ಹಾಗೂ ಡೀನ್ ಡಾ.ಎ. ಸೆಂಥಿಲ್ ಹೇಳಿದ್ದಾರೆ.

ಮೀನುಗಾರಿಕೆಗೆ ತೆರಳಿದ್ದ ವೇಳೆ ಟ್ರಾಲರ್ ಗಳಿಗೆ ಶೇ.40-50ರಷ್ಟು ಪ್ಲಾಸ್ಟಿಕ್ ಸಿಗುತ್ತಿದೆ. ಟ್ರಾಲರ್‍ಗಳಿಗೆ ಸಿಕ್ಕಬಿದ್ದ ಈ ಮೀನು ಸಮುದ್ರದ ಆಳದಲ್ಲಿ ಪ್ಲಾಸ್ಟಿಕ್ ಸೇವಿಸಿರಬಹುದು ಎಂದು ಮೀನುಗಾರ ಮಾಹಿತಿ ನೀಡಿದ್ದಾನೆ.

ಮೀನುಗಳು ಮೈಕ್ರೋಪ್ಲಾಸ್ಟಿಕ್‍ಗಳನ್ನೂ ಸೇವಿಸುತ್ತದೆ. ಅವುಗಳ ಪಾಲಿಗೆ ಇದು ವಿಷಕಾರಿ. ಹೆಚ್ಚಿನ ಪ್ಲಾಸ್ಟಿಕ್ ತ್ಯಾಜ್ಯ ನದಿಗಳು ಹಾಗೂ ಚರಂಡಿಗಳ ಮೂಲಕ ಸಮುದ್ರ ಸೇರುತ್ತಿದೆ. ತ್ಯಾಜ್ಯ ಸಮುದ್ರ ಸೇರುವುದನ್ನು ತಡೆಯಲು ಸರ್ಕಾರ ಪ್ರತ್ಯೇಕ ಗ್ರಿಡ್ ನಿರ್ಮಿಸುವ ಅಗತ್ಯವಿದೆ. ಪ್ಲಾಸ್ಟಿಕ್ ತಿನ್ನಬಾರದು ಎಂದು ನಾವು ಮೀನುಗಳಿಗೆ ಹೇಳಲು ಸಾಧ್ಯವಿಲ್ಲ. ಆದರೆ ನಾವು ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬಹುದು ಎಂದು ಓಷಿಯನ್ ಪ್ಲಾಸ್ಟಿಕ್ ರಿಸೈಕ್ಲಿಂಗ್ ಕೋಆರ್ಡಿನೇಟರ್ ನಾಗರಾಜ್ ರಾಘವ್ ಅಂಚನ್ ಹೇಳಿದ್ದಾರೆ.

ಇದನ್ನೂ ಓದಿ : ಬೆಳಗಾವಿ ಲೋಕಸಭಾ ಉಪಚುನಾವಣೆ: ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಅಭ್ಯರ್ಥಿ -Vishwanews24

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago