ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.
ಮಂಗಳೂರಿನ ಆಳ ಸಮುದ್ರದಲ್ಲಿ ‘ಐಎಫ್‌ಬಿ ಮಂಜುಮಾತಾ’ ಎಂಬ ಹೆಸರಿನ ದೋಣಿಯಲ್ಲಿ ಆರು ಜನ ಮೀನುಗಾರರು ಎಂದಿನಂತೆ ಮೀನುಗಾರಿಕೆಯಲ್ಲಿ ತೊಡಗಿದ್ದರು. ಆದರೆ, ಇದ್ದಕ್ಕಿದ್ದಂತೆ ಸಮುದ್ರ ಭೀಕರವಾಗಿ ಪ್ರಕ್ಷುಬ್ಧಗೊಂಡಿದ್ದು, ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಒಳಗಡೆ ಭಾರಿ ಪ್ರಮಾಣದಲ್ಲಿ ನೀರು ಒಳನುಗ್ಗಲಾರಂಭಿಸಿದೆ. ನೀರಿನ ಒತ್ತಡ ಹೆಚ್ಚಾಗುತ್ತಿದ್ದಂತೆ ಬೋಟ್ ಸಮುದ್ರದಲ್ಲಿ ಮುಳುಗಲು ಪ್ರಾರಂಭವಾಗಿದೆ.
ಮೀನುಗಾರರು ಅಪಾಯದಲ್ಲಿರುವ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ, ತಕ್ಷಣವೇ ಕಡಲ ಕಾವಲು ಪಡೆಯ ಅತ್ಯಾಧುನಿಕ ಹಡಗು ‘ಐಸಿಜಿಎಸ್ ಸಚೇತ್’ ಮೂಲಕ ಸ್ಥಳಕ್ಕೆ ಧಾವಿಸಿದರು. ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರಿಂದ ದೋಣಿಯ ಹತ್ತಿರ ಹೋಗುವುದು ಸವಾಲಾಗಿತ್ತು. ಈ ಸಂದರ್ಭದಲ್ಲಿ ಕೋಸ್ಟ್ ಗಾರ್ಡ್ ಸಿಬ್ಬಂದಿ ಅತ್ಯಾಧುನಿಕ ತಂತ್ರಜ್ಞಾನವಾದ ರಿಮೋಟ್-ಆಪರೇಟೆಡ್ ಲೈಫ್‌ಬಾಯ್‌ಗಳನ್ನು ಬಳಸಿದರು. ಮುಳುಗುತ್ತಿದ್ದ ಬೋಟ್‌ನಲ್ಲಿದ್ದ ಮೀನುಗಾರರ ಬಳಿಗೆ ಈ ರಿಮೋಟ್ ಚಾಲಿತ ಲೈಫ್‌ಬಾಯ್‌ಗಳನ್ನು ಕಳುಹಿಸಿ, ಅವರ ನೆರವಿನೊಂದಿಗೆ ಆರು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.
ಕೋಸ್ಟ್ ಗಾರ್ಡ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಅವರನ್ನು ಪ್ರಾಥಮಿಕ ಚಿಕಿತ್ಸೆ, ಆಹಾರ ಹಾಗೂ ಅಗತ್ಯ ನೆರವಿಗಾಗಿ ಮಂಗಳೂರಿನ ನ್ಯೂ ಮಂಗಳೂರು ಬಂದರಿಗೆ ಯಶಸ್ವಿಯಾಗಿ ಕರೆತರಲಾಗಿದೆ. ಸದ್ಯ ಎಲ್ಲಾ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…
ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…
ಉಡುಪಿ :ಆ. 27 ರಂದು ನೇರ ಸಂದರ್ಶನ ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…