Featured

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ

ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.

ಮಂಗಳೂರಿನ ಆಳ ಸಮುದ್ರದಲ್ಲಿ ‘ಐಎಫ್‌ಬಿ ಮಂಜುಮಾತಾ’ ಎಂಬ ಹೆಸರಿನ ದೋಣಿಯಲ್ಲಿ ಆರು ಜನ ಮೀನುಗಾರರು ಎಂದಿನಂತೆ ಮೀನುಗಾರಿಕೆಯಲ್ಲಿ ತೊಡಗಿದ್ದರು. ಆದರೆ, ಇದ್ದಕ್ಕಿದ್ದಂತೆ ಸಮುದ್ರ ಭೀಕರವಾಗಿ ಪ್ರಕ್ಷುಬ್ಧಗೊಂಡಿದ್ದು, ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಒಳಗಡೆ ಭಾರಿ ಪ್ರಮಾಣದಲ್ಲಿ ನೀರು ಒಳನುಗ್ಗಲಾರಂಭಿಸಿದೆ. ನೀರಿನ ಒತ್ತಡ ಹೆಚ್ಚಾಗುತ್ತಿದ್ದಂತೆ ಬೋಟ್ ಸಮುದ್ರದಲ್ಲಿ ಮುಳುಗಲು ಪ್ರಾರಂಭವಾಗಿದೆ.

ಮೀನುಗಾರರು ಅಪಾಯದಲ್ಲಿರುವ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ, ತಕ್ಷಣವೇ ಕಡಲ ಕಾವಲು ಪಡೆಯ ಅತ್ಯಾಧುನಿಕ ಹಡಗು ‘ಐಸಿಜಿಎಸ್ ಸಚೇತ್’ ಮೂಲಕ ಸ್ಥಳಕ್ಕೆ ಧಾವಿಸಿದರು. ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರಿಂದ ದೋಣಿಯ ಹತ್ತಿರ ಹೋಗುವುದು ಸವಾಲಾಗಿತ್ತು. ಈ ಸಂದರ್ಭದಲ್ಲಿ ಕೋಸ್ಟ್ ಗಾರ್ಡ್ ಸಿಬ್ಬಂದಿ ಅತ್ಯಾಧುನಿಕ ತಂತ್ರಜ್ಞಾನವಾದ ರಿಮೋಟ್-ಆಪರೇಟೆಡ್ ಲೈಫ್‌ಬಾಯ್‌ಗಳನ್ನು ಬಳಸಿದರು. ಮುಳುಗುತ್ತಿದ್ದ ಬೋಟ್‌ನಲ್ಲಿದ್ದ ಮೀನುಗಾರರ ಬಳಿಗೆ ಈ ರಿಮೋಟ್ ಚಾಲಿತ ಲೈಫ್‌ಬಾಯ್‌ಗಳನ್ನು ಕಳುಹಿಸಿ, ಅವರ ನೆರವಿನೊಂದಿಗೆ ಆರು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.

ಕೋಸ್ಟ್ ಗಾರ್ಡ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಅವರನ್ನು ಪ್ರಾಥಮಿಕ ಚಿಕಿತ್ಸೆ, ಆಹಾರ ಹಾಗೂ ಅಗತ್ಯ ನೆರವಿಗಾಗಿ ಮಂಗಳೂರಿನ ನ್ಯೂ ಮಂಗಳೂರು ಬಂದರಿಗೆ ಯಶಸ್ವಿಯಾಗಿ ಕರೆತರಲಾಗಿದೆ. ಸದ್ಯ ಎಲ್ಲಾ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

6 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 hours ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 day ago