Featured

ಮಂಗಳೂರು ಮೀನುಗಾರಿಕಾ ಬೋಟ್ ದುರಂತ ಪ್ರಕರಣ : ಮೃತರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ ಬಿಡುಗಡೆ : ಕೋಟಾ ಶ್ರೀನಿವಾಸ ಪೂಜಾರಿ – Vishwanews24

ಮಂಗಳೂರು ಮೀನುಗಾರಿಕಾ ಬೋಟ್ ದುರಂತ ಪ್ರಕರಣ : ಮೃತರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ ಬಿಡುಗಡೆ : ಕೋಟಾ ಶ್ರೀನಿವಾಸ ಪೂಜಾರಿ – Vishwanews24

ಮಂಗಳೂರು: ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೃಹತ್ ಬೋಟೊಂದು ಸಮುದ್ರದಲ್ಲಿ 15 ನಾಟಿಕಲ್ ಮೈಲು ದೂರದಲ್ಲಿ ಮುಳುಗಡೆಗೊಂಡ ಪ್ರಕರಣಕ್ಕೆ ಸಂಬಂಧಿಸಿ ಮೃತರ ಕುಟುಂಬಕ್ಕೆ 6 ಲಕ್ಷ ಪರಿಹಾರ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿಯವರು, ”ಮಂಗಳೂರಿನ ಪಡುಕಡಲಿನಲ್ಲಿ ಮೀನುಗಾರಿಕೆ ದೋಣಿ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರ ನಿರ್ದೇಶನದ ಮೇರೆಗೆ ತಲಾ 6 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದ ಪರವಾಗಿ ಸಾಂತ್ವಾನ ಹೇಳುತ್ತಾ ನೊಂದ ಕುಟುಂಬಗಳ ಪರವಾಗಿ, ಮತ್ತಷ್ಟು ನೆರವಿಗಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ” ಎಂದು ತಿಳಿಸಿದ್ದಾರೆ.

ಇನ್ನು ಮೃತ ಮೀನುಗಾರರ ಮೃತ ದೇಹವಿರಿಸಿರುವ ವೆನ್ಲಾಕ್ ಆಸ್ಪತ್ರೆ ಶವಗಾರಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದ ಅವರು, ”ದುರಂತ ಹೇಗಾಯಿತು ಅನ್ನೋವುದರ ಬಗ್ಗೆ ತನಿಖೆಯಾಗುತ್ತಿದೆ. ಶೀಘ್ರವೇ ಉಳಿದವರ ಮೃತದೇಹವನ್ನೂ ಪತ್ತೆಹಚ್ಚಲಾಗುವುದು. ಬಲೆಯೊಳಗೆ ಮೃತದೇಹ ಸಿಲುಕಿಹಾಕಿಕೊಂಡಿದ್ದರಿಂದ ವಿಳಂಬವಾಗುತ್ತಿದೆ” ಎಂದು ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

12 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

12 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

13 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

15 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

16 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

16 hours ago