Featured

ಮಂಗಳೂರು: ಮೀನುಗಾರಿಕೆಗೆ ತೆರಳಿದ ಬೋಟ್‌ ಸಮುದ್ರ ಮಧ್ಯೆ ಬೆಂಕಿಗಾಹುತಿ ; 10 ಮೀನುಗಾರರ ರಕ್ಷಣೆ – vishwanews24

ಮಂಗಳೂರು: ಮೀನುಗಾರಿಕೆಗೆ ತೆರಳಿದ ಬೋಟ್‌ ಸಮುದ್ರ ಮಧ್ಯೆ ಬೆಂಕಿಗಾಹುತಿ ; 10 ಮೀನುಗಾರರ ರಕ್ಷಣೆ

ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್‌ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ.

ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹುಸೈನ್ ಎಂಬವರ ಮಾಲಕತ್ವದ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗಿನ ಜಾವ ಸುಮಾರು 3 ರಿಂದ 4 ಗಂಟೆಯ ವೇಳೆಗೆ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೋಟ್ ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ನೀಡಿದ ಬೋಟ್ ಮಾಲಕರು, ಭಾನುವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಧಕ್ಕೆಯಿಂದ ಸುಮಾರು 88 ನಾಟಿಕಲ್ ದೂರದಲ್ಲಿ ಬೋಟ್ ಮುಳುಗಿದೆ. ಜೊತೆಯಲ್ಲಿದ್ದ ಬೋಟ್ ನವರು ಅವಘಡ ಗಮನಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

3 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

4 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

4 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

5 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

5 hours ago