ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್‌ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ.
ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹುಸೈನ್ ಎಂಬವರ ಮಾಲಕತ್ವದ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗಿನ ಜಾವ ಸುಮಾರು 3 ರಿಂದ 4 ಗಂಟೆಯ ವೇಳೆಗೆ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೋಟ್ ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ನೀಡಿದ ಬೋಟ್ ಮಾಲಕರು, ಭಾನುವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಧಕ್ಕೆಯಿಂದ ಸುಮಾರು 88 ನಾಟಿಕಲ್ ದೂರದಲ್ಲಿ ಬೋಟ್ ಮುಳುಗಿದೆ. ಜೊತೆಯಲ್ಲಿದ್ದ ಬೋಟ್ ನವರು ಅವಘಡ ಗಮನಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…