ಮಂಗಳೂರು : ಬೋಳಾರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಆಳಸಮುದ್ರದಲ್ಲಿ ಮಗುಚಿಬಿದ್ದಿದ್ದು ನಾಪತ್ತೆಯಾಗಿದ್ದ ಆರು ಮಂದಿ ಮೀನುಗಾರರ ಪೈಕಿ ಇಬ್ಬರ ಮೃತದೇಹವನ್ನು ಮುಳುಗುತಜ್ಞರು ಮೇಲಕ್ಕೆತ್ತಿದ್ದಾರೆ.
ಮೃತರನ್ನು ಬೊಕ್ಕಪಟ್ನ ನಿವಾಸಿಗಳಾದ ಪಾಂಡುರಂಗ ಸುವರ್ಣ, ಪ್ರೀತಂ (58) ಎಂದು ಗುರುತಿಸಲಾಗಿದೆ. ಇನ್ನು ನಾಪತ್ತೆಯಾದವರನ್ನು ಝಿಯಾವುಲ್ಲ(32), ಅನ್ಸಾರ್ (31), ಹಸೈನಾರ್ (25), ಚಿಂತನ್ (21) ಎಂದು ಹೇಳಲಾಗಿದೆ.
ಸೋಮವಾರ ನಸುಕಿನ ಜಾವ ಬೋಳಾರದ ಶ್ರೀ ರಕ್ಷಾ ಮೀನುಗಾರಿಕಾ ಬೋಟ್‌ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು ರಾತ್ರಿ ವಾಪಾಸ್ ಬರಬೇಕಾಗಿತ್ತು. ಆದರೆ ಉಳ್ಳಾಲದ ಪಶ್ಚಿಮ ಭಾಗದ ಹಲವು ನಾಟಿಕಲ್ ಮೈಲ್ ದೂರದಲ್ಲಿ ದೋಣಿ ಮಗುಚಿ ಬಿದ್ದಿದೆ. 14 ಮಂದಿಯನ್ನು ರಕ್ಷಿಸಲಾಗಿದ್ದು ಆರು ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರ ಮೃತ ದೇಹ ಲಭಿಸಿದೆ. ಇನ್ನುಳಿದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಲಿದೆ.
ಮೀನಿನ ಸಂಗ್ರಹ ಅಧಿಕವಾದ ಹಾಗೂ ಭಾರೀ ಗಾಳಿ ಬೀಸಿದ ಪರಿಣಾಮ ಈ ದೋಣಿ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…