ಮಂಗಳೂರು : ಮೀನುಗಾರಿಕೆ ಧಕ್ಕೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಸಿಎಂ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಸಿಎಂ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರಿನ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಸಚಿವರಾದ ಯು ಟಿ ಖಾದರ್, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್, ಇನಾಯತ್ ಅಲಿ, ದಕ್ಷಿಣ ಕನ್ನಡ ಜಿಲ್ಲಾ ಟ್ರಾಲ್ ಬೋಟ್ ಮೀನುಗಾರರ ಸಂಘದ ಮಾಜಿ ಅಧ್ಯಕ್ಷರಾದ ಚೇತನ್ ಬೆಂಗ್ರೆ, ಮೋಹನ್ ಬೆಂಗ್ರೆ ಮತ್ತಿತರರ ಸ್ಥಳೀಯ ಮುಖಂಡರು ಇದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಧಕ್ಕೆ ಪ್ರದೇಶದಲ್ಲಿ ಕಾಲ್ನಡಿಗೆಯಲ್ಲಿ ಸುತ್ತಾಡಿದ ಸಿಎಂ, ಸಮುದ್ರದಿಂದ ಬಂದಿದ್ದ ತಾಜಾ ಮೀನುಗಳ ವಹಿವಾಟು ಹಾಗೂ ಮೀನುಗಾರಿಕಾ ಬೋಟ್‌ಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಮೀನುಗಾರರು ಮುಖ್ಯಮಂತ್ರಿಗಳಿಗೆ ಜೈಕಾರ ಕೂಗಿದರು. ಬಳಿಕ ಮೀನುಗಾರರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ಡಿ.ಕೆ. ಶಿವಕುಮಾರ್, ಅವರ ಸಮಸ್ಯೆಗಳನ್ನು ಆಲಿಸಿದರು.

ಲಾಡ್ಜ್‌ನಲ್ಲಿ ಹೆಂಡತಿ ಕೊಂದು ಪರಾರಿಯಾಗಿದ್ದ ಗಂಡ ಆತ್ಮಹತ್ಯೆ – vishwanews24

ಇನ್ನು ಶುಕ್ರವಾರ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮೀನುಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಯೋಜನೆಗಳ ಕುರಿತು ಚರ್ಚೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಮುಂದಿನ ಯೋಜನೆಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಧಕ್ಕೆ ಪ್ರದೇಶದಲ್ಲಿ ವ್ಯಾಪಾರ-ವಹಿವಾಟು ಬಂದ್ ಆಗಿರುವುದನ್ನು ಗಮನಿಸಿದ ಮುಖ್ಯಮಂತ್ರಿ, ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರು. ಅಲ್ಲದೆ, ಧಕ್ಕೆ ಬಂದ್ ಮಾಡಿಸಿದ ಅಧಿಕಾರಿಗಳ ವಿರುದ್ಧ ಅಮಾನತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

 ಉಡುಪಿ : ಸೆ. 21 ರಂದು ನೇರ ಸಂದರ್ಶನ – vishwanews24

Leave a Reply