ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರಿನ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಸಚಿವರಾದ ಯು ಟಿ ಖಾದರ್, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್, ಇನಾಯತ್ ಅಲಿ, ದಕ್ಷಿಣ ಕನ್ನಡ ಜಿಲ್ಲಾ ಟ್ರಾಲ್ ಬೋಟ್ ಮೀನುಗಾರರ ಸಂಘದ ಮಾಜಿ ಅಧ್ಯಕ್ಷರಾದ ಚೇತನ್ ಬೆಂಗ್ರೆ, ಮೋಹನ್ ಬೆಂಗ್ರೆ ಮತ್ತಿತರರ ಸ್ಥಳೀಯ ಮುಖಂಡರು ಇದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಧಕ್ಕೆ ಪ್ರದೇಶದಲ್ಲಿ ಕಾಲ್ನಡಿಗೆಯಲ್ಲಿ ಸುತ್ತಾಡಿದ ಸಿಎಂ, ಸಮುದ್ರದಿಂದ ಬಂದಿದ್ದ ತಾಜಾ ಮೀನುಗಳ ವಹಿವಾಟು ಹಾಗೂ ಮೀನುಗಾರಿಕಾ ಬೋಟ್‌ಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಮೀನುಗಾರರು ಮುಖ್ಯಮಂತ್ರಿಗಳಿಗೆ ಜೈಕಾರ ಕೂಗಿದರು. ಬಳಿಕ ಮೀನುಗಾರರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ಡಿ.ಕೆ. ಶಿವಕುಮಾರ್, ಅವರ ಸಮಸ್ಯೆಗಳನ್ನು ಆಲಿಸಿದರು.
ಇನ್ನು ಶುಕ್ರವಾರ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮೀನುಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಯೋಜನೆಗಳ ಕುರಿತು ಚರ್ಚೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಮುಂದಿನ ಯೋಜನೆಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಧಕ್ಕೆ ಪ್ರದೇಶದಲ್ಲಿ ವ್ಯಾಪಾರ-ವಹಿವಾಟು ಬಂದ್ ಆಗಿರುವುದನ್ನು ಗಮನಿಸಿದ ಮುಖ್ಯಮಂತ್ರಿ, ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರು. ಅಲ್ಲದೆ, ಧಕ್ಕೆ ಬಂದ್ ಮಾಡಿಸಿದ ಅಧಿಕಾರಿಗಳ ವಿರುದ್ಧ ಅಮಾನತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…
ತಿರುಮಲ ಬ್ರಹ್ಮೋತ್ಸವ ಸಂಭ್ರಮ : ಘಾಟ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧ ತಿರುಪತಿ: ತಿರುಮಲದಲ್ಲಿ ವಾರ್ಷಿಕ ಸಲಕಟ್ಲ ಬ್ರಹ್ಮೋತ್ಸವದ…
ಮಂಗಳೂರು: ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ…
ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; 10-15 ಲಕ್ಷ ರೂ. ನಷ್ಟ ಉಡುಪಿ: ಕಾಪು ತಾಲೂಕಿನ ಕಟಪಾಡಿ ಸಮೀಪದ…