Featured

ಮಂಗಳೂರು : ಮುಂದಿನ ಬಾರಿ ಅಧಿಕಾರ ಕಾಂಗ್ರೆಸ್‌ಗೆಂದು ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿದೆ : ಯು.ಟಿ. ಖಾದರ್‌ -Vishwanews24

ಮಂಗಳೂರು : ಮುಂದಿನ ಬಾರಿ ಅಧಿಕಾರ ಕಾಂಗ್ರೆಸ್‌ಗೆಂದು ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿದೆ : ಯು.ಟಿ. ಖಾದರ್‌ -Vishwanews24

ಮಂಗಳೂರು : “ಮುಂದಿನ ಬಾರಿ ಅಧಿಕಾರ ಕಾಂಗ್ರೆಸ್‌ಗೆಂದು ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿದೆ. ಏಕೆಂದರೆ, ಪ್ರಸ್ತುತ ಆಡಳಿತದ ಬಗ್ಗೆ ಅವರೇ ಅಸಮಾಧಾನ ಹೊಂದಿದ್ದಾರೆ” ಎಂದು ಶಾಸಕ ಯು.ಟಿ. ಖಾದರ್‌ ಹೇಳಿದರು.

ಸೋಮವಾರ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಪ್ರಸ್ತುತ ಸರ್ಕಾರಕ್ಕೆ ಸಂಬಂಧಿಸಿದಂತೆ ಜನರ ಮನಸ್ಥಿಯ ಬಗ್ಗೆ ಬಿಜೆಪಿ ನಾಯಕರಿಗೆ ತಿಳಿದಿದೆ. ಬಿಜೆಪಿ ಆಡಳಿತವನ್ನು ನೋಡಿ ಜನರು ಬೇಸತ್ತಿದ್ದಾರೆ. ಒಟ್ಟಾರೆ ನೋಡುವುದಾದರೆ ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎನ್ನುವುದನ್ನು ಸೂಚಿಸುತ್ತದೆ. ನಾವೆಲ್ಲಾ ಒಗ್ಗಟ್ಟಾಗಿರುವುದರಿಂದ ಬಿಜೆಪಿಗೆ ಕಾಂಗ್ರೆಸ್‌ ನಾಯಕರ ನಡುವೆ ವ್ಯತ್ಯಾಸ ಸೃಷ್ಟಿಸಲು ಅಸಾಧ್ಯ” ಎಂದರು.

“ಪಡಿತರ ಚೀಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಜುಲೈ 7ರಂದು ತೊಕ್ಕೊಟ್ಟಿನಲ್ಲಿ ಆಹಾರ ಅದಾಲತ್‌‌ ನಡೆಸಲಾಗುವುದು. ಮಂಗಳೂರು ಕ್ಷೇತ್ರಕ್ಕೆ ಸಂಬಂಧಪಟ್ಟ ಪಂಚಾಯತ್‌ಗಳಿಂದ ಜನರು ಅರ್ಜಿ ತೆಗೆದುಕೊಳ್ಳಬೇಕು. ಬಳಿಕ ಅದನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ” ಎಂದು ತಿಳಿಸಿದರು.

“ಲಾಕ್‌ಡೌನ್‌ನಿಂದ ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳ ಮೇಲೆ ತೀವ್ರವಾದ ಪರಿಣಾಮ ಬೀರಿದೆ. ಈ ವಿಚಾರವನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಬ್ಯಾಂಕ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳ ನಿರ್ವಹಣೆ ಹಾಗೂ ಅವರ ಸಮಸ್ಯೆಯನ್ನು ಪರಿಹರಿಸಲು ಸಭೆ ಕರೆಯಬೇಕು” ಎಂದು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago