ಮಂಗಳೂರು: ಮುರಾರಿ ಸಮುದಾಯದ ಜನರು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದು, ಈ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರಿಗೆ ಮುರಾರಿ ಸಮುದಾಯದವರು ನಗರದ ಸಕ್ರ್ಯೂಟ್ ಹೌಸ್‍ನಲ್ಲಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕೆ. ಟಿ. ಸುವರ್ಣ, ಪುತ್ತೂರಿನ ಪ್ರಸಿದ್ದ ವೈದ್ಯರಾದ ಪ್ರಸಾದ್ ಭಂಡಾರಿ ಹಾಗೂ ಮುರಾರಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಐದು ದಿನ ಭಾರೀ ಮಳೆ ; ಕರಾವಳಿಯಲ್ಲಿ ಏ.13ರಿಂದ ಏ.16 ರವರೆಗೆ ಎಲ್ಲೋ ಅಲರ್ಟ್ ಘೋಷಣೆ -Vishwanews24
ಮನವಿಯಲ್ಲಿ ಮುರಾರಿ ಜಾತಿಗೆ ಸೇರಿದ ಜನಾಂಗದವರು 4 ತಲೆಮಾರಿನ ಹಿಂದೆ ಕೇರಳದಿಂದ ವಲಸೆ ಬಂದು ಕರ್ನಾಟಕದಲ್ಲಿ ನೆಲೆಸಿರುತ್ತಾರೆ. ಪುತ್ತೂರು ತಾಲೂಕಿನ ಈಶ್ವರ ಮಂಗಲ, ಸುಳ್ಯ, ಕಡಬ ತಾಲೂಕಿನ ನೆಲ್ಯಾಡಿ, ಮಡಿಕೇರಿ ಹಾಗೂ ಮೈಸೂರಿನಲ್ಲಿ ಸದರಿ ಜಾತಿಗೆ ಸೇರಿದ ಸುಮಾರು 1,500 ಜನರು ನೆಲೆಸಿರುತ್ತಾರೆ.
ಮುರಾರಿ ಸಮುದಾಯದ ಜನರು ಶೈಕ್ಷಣಿಕವಾಗಿ ತೀರಾ ಹಿಂದುಳಿದವರಾಗಿದ್ದು, ಅವರುಗಳು ಕುಲ ಕಸುಬಾಗಿ ಮಣ್ಣಿನ ಕುಸುರಿ, ಬುಟ್ಟಿ ಹೆಣೆಯುವುದನ್ನು ಅಳವಡಿಸಿಕೊಂಡಿರುವುದಲ್ಲದೇ ಜೀವನ ನಿರ್ವಹಣೆಗಾಗಿ ಹೆಚ್ಚಿನ ಜನರು ಕೂಲಿ ಕೆಲಸ ಮಾಡುತ್ತಿದ್ದಾರೆ ಹಾಗೂ ಈ ಜನಾಂಗದವರ ಮಾತೃ ಭಾಷೆ ಮಲಯಾಳಂ ಆಗಿರುತ್ತದೆ.
ಹವಾಮಾನ ವೈಪರೀತ್ಯ ಹಿನ್ನೆಲೆ; ದುಬೈನಿಂದ ಮಂಗಳೂರಿಗೆ ಬರಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡಿಂಗ್ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…