ಮಂಗಳೂರು:  ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ – ಕದ್ರಿ ದೇವಸ್ಥಾನ ಜಾತ್ರೆಯಲ್ಲಿ ಅಳವಡಿಸಲಾಗಿದ್ದ ಬ್ಯಾನರ್‌ ತೆರವು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು:  ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ – ಕದ್ರಿ ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಬ್ಯಾನರ್‌ ತೆರವು

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬುದಾಗಿ ವಿಶ್ವ ಹಿಂದು ಪರಿಷತ್-ಬಜರಂಗದಳದಿಂದ ಅಳವಡಿಸಲಾಗಿದ್ದ ಬ್ಯಾನರ್‌ನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.

ಜನವರಿ 15ರಿಂದ 21ರವರೆಗೆ ಕದ್ರಿ ಜಾತ್ರೆ ನಡೆಯಲಿದೆ. ಆದರೆ ಈ ಜಾತ್ರೆಯಲ್ಲಿ ಸನಾತನ ಧರ್ಮದ ಹಾಗೂ ಆಚರಣೆಯಲ್ಲಿ ನಂಬಿಕೆ ಹಾಗೂ ವಿಶ್ವಾಸ ಉಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶವಿದೆ ಎಂದು ಗುರುವಾರ ಕ್ಷೇತ್ರದ ಬಳಿ ಬ್ಯಾನರ್  ಹಾಕಲಾಗಿದೆ.

ಮಂಗಳೂರು: ಬಿರುವೆರ್ ಕುಡ್ಲ ವತಿಯಿಂದ ಮೂರು ಕುಟುಂಬಗಳಿಗೆ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂ. ಮೌಲ್ಯದ ಚೆಕ್ ವಿತರಣೆ – Vishwanews24

ಇನ್ನು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಇರುವವರಿಗೆ ಹಾಗೂ ವಿಗ್ರಹಾರಾಧನೆಯನ್ನು ಹರಾಮ್ ಎಂದು ನಂಬಿರುವವರಿಗೆ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದೂ ಬ್ಯಾನರ್‌ನಲ್ಲಿ ಬರೆಯಲಾಗಿತ್ತು.

ಕದ್ರಿ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವುದರಿಂದ ಬ್ಯಾನರ್‌ ಅಳವಡಿಕೆಗೆ ಆಡಳಿತ ಮಂಡಳಿಯ ಅನುಮತಿ ಇರಲಿಲ್ಲ. ಹೀಗಾಗಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬ್ಯಾನರ್‌ನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಇನ್ನು ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಅರೋಪಿಗಳ ಪತ್ತೆಗೆ 10 ಲಕ್ಷ ಬಹುಮಾನ ಘೋಷಣೆ – Vishwanews24

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Leave a Reply