ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬುದಾಗಿ ವಿಶ್ವ ಹಿಂದು ಪರಿಷತ್-ಬಜರಂಗದಳದಿಂದ ಅಳವಡಿಸಲಾಗಿದ್ದ ಬ್ಯಾನರ್‌ನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.
ಜನವರಿ 15ರಿಂದ 21ರವರೆಗೆ ಕದ್ರಿ ಜಾತ್ರೆ ನಡೆಯಲಿದೆ. ಆದರೆ ಈ ಜಾತ್ರೆಯಲ್ಲಿ ಸನಾತನ ಧರ್ಮದ ಹಾಗೂ ಆಚರಣೆಯಲ್ಲಿ ನಂಬಿಕೆ ಹಾಗೂ ವಿಶ್ವಾಸ ಉಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶವಿದೆ ಎಂದು ಗುರುವಾರ ಕ್ಷೇತ್ರದ ಬಳಿ ಬ್ಯಾನರ್ ಹಾಕಲಾಗಿದೆ.
ಇನ್ನು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಇರುವವರಿಗೆ ಹಾಗೂ ವಿಗ್ರಹಾರಾಧನೆಯನ್ನು ಹರಾಮ್ ಎಂದು ನಂಬಿರುವವರಿಗೆ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದೂ ಬ್ಯಾನರ್‌ನಲ್ಲಿ ಬರೆಯಲಾಗಿತ್ತು.
ಕದ್ರಿ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವುದರಿಂದ ಬ್ಯಾನರ್ ಅಳವಡಿಕೆಗೆ ಆಡಳಿತ ಮಂಡಳಿಯ ಅನುಮತಿ ಇರಲಿಲ್ಲ. ಹೀಗಾಗಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬ್ಯಾನರ್‌ನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಇನ್ನು ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…