Featured

ಮಂಗಳೂರು : ಮುಸ್ಲಿಂ ಸಮುದಾಯಕ್ಕೆ ಬೈದರೆ ಪ್ರಮೋಶನ್‌ ಸಿಗದು, ಅಂತಹ ಕನಸು ಕಾಣುವುದು ಬೇಡ : ಈಶ್ವರಪ್ಪ ಗೆ ಎಂ. ಎಸ್‌. ಮುಹಮ್ಮದ್‌ -Vishwanews24

ಮಂಗಳೂರು : ಶ್ರೀರಾಮ ಸೇನೆ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಸಚಿವ ಈಶ್ವರಪ್ಪ ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿದ್ದಾರೆ. ಇದನ್ನು ಅಲ್ಪಸಂಖ್ಯಾತರು ಖಂಡಿಸುತ್ತಿದ್ದು, ಈ ಚಾಳಿ ಮುಂದುವರಿಸಿದರೆ ಈಶ್ವರಪ್ಪ ಅವರು ಜಿಲ್ಲೆಗೆ ಬರುವಾಗ ಮುಸ್ಲಿಂ ಸಮುದಾಯ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಲ್ಪ ಸಂಖ್ಯಾತ ಮುಖಂಡ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ಎಸ್‌. ಮುಹಮ್ಮದ್‌ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾಕಾಂಗ್ರೆಸ್‌ ಕಚೇರಿಯಲ್ಲಿಮಂಗಳವಾರ ನಡೆದ ಸುದ್ದಿಗೋಷ್ಟಿಯ ಮಾತನಾಡಿದ ಅವರು ಮುಸ್ಲಿಂ ಸಮುದಾಯದ ವಿರುದ್ಧದ ಹೇಳಿಕೆಗಳು ಈಶ್ವರಪ್ಪನವರಿಂದ ಇದೇ ಮೊದಲಲ್ಲ. ಈ ಹಿಂದೆಯೂ ಕಚೇರಿ ಗುಡಿಸಿದ ಮುಸ್ಲಿಂ ಸಮುದಾಯದವರಿಗೆ ಮಾತ್ರ ಬಿಜೆಪಿ ಟಿಕೆಟ್‌ ಎಂದು ಹೇಳಿಕೆ ನೀಡಿದ್ದರು. ಅಂತಹ ಟಿಕೆಟ್‌ ನಮಗೆ ಬೇಕಾಗಿಲ್ಲಎಂದರು.

ದೇಶಪ್ರೇಮದ ಪಾಠ ನಾವು ಈಶ್ವರಪ್ಪರಿಂದ ಕಲಿಯಬೇಕಾಗಿಲ್ಲ. ಪಾಕಿಸ್ತಾನಕ್ಕೆ ಅವರು ಬೇಕಾದರೆ ಹೋಗಲಿ. ನವಾಝ್‌ ಶರೀಫ್‌ ಅವರ ಮಗಳ ಹುಟ್ಟುಹಬ್ಬಕ್ಕೆ ಆಮಂತ್ರಣವಿಲ್ಲದೆ ಹೋಗಿದ್ದು ಪ್ರಧಾನಿ ನರೇಂದ್ರ ಮೋದಿ. ಅವರ ಬಗ್ಗೆ ಈಶ್ವರಪ್ಪ ಮಾತನಾಡಲಿ. ಜಾತ್ಯತೀತ ಸಿದ್ಧಾಂತಕ್ಕೆ ನಾವು ಎಂದೂ ಬದ್ಧ ಎಂದರು.

ಕಾಂಗ್ರೆಸ್‌ ಮುಖಂಡ, ಜಿಪಂ ಸದಸ್ಯ ಶಾಹುಲ… ಹಮೀದ್‌ ಮಾತನಾಡಿ, ಈಶ್ವರಪ್ಪ  ಮಾನಸಿಕ ಸ್ಥಿಮಿತ ಕಳೆದುಕೊಂಡು ಏನೇನೋ ಮಾತನಾಡುತ್ತಿದ್ದಾರೆ. ಸಚಿವ ಈಶ್ವರಪ್ಪ ಭ್ರಷ್ಟಾಚಾರಿ ಅನ್ನುವುದು ಗೊತ್ತು, ಆದರೆ ಇದೀಗ ಮುಸ್ಲಿಂ ಸಮುದಾಯ ಅವಮಾನಿಸುವ ಮೂಲಕ ಅವರ ಮನಸ್ಥಿತಿಯನ್ನು ಎಲ್ಲರಿಗೂ ಗೊತ್ತುಪಡಿಸಿದ್ದಾರೆ ಎಂದರು. ರಾಜ್ಯದಲ್ಲಿಬಿಜೆಪಿಗೆ ಶೇ.36 ಮಂದಿ ಮಾತ್ರ ಮತ ಹಾಕಿದ್ದಾರೆ. ಹಾಗಿದ್ದರೆ ಉಳಿದವರೆಲ್ಲರೂ ದೇಶದ್ರೋಹಿಗಳೇ ಎಂದು ಶಾಹುಲ್‌ ಪ್ರಶ್ನಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸಿಟಿ ರವಿಯವರು ಯಾವತ್ತೂ ಮುಸ್ಲಿಂರ ಬಗ್ಗೆ ಈ ರೀತಿ ಮಾತನಾಡುವುದಿಲ್ಲ. ಯಾಕೆಂದರೆ ಅವರಿಗೆ ಮುಸ್ಲಿಂ ಬಂಧುಗಳು ಇದ್ದಾರೆ. ರಾಜಕೀಯ ಬದುಕು ಯಾರಿಗೂ ಶಾಶ್ವತವಲ್ಲ. ಇದ್ದಷ್ಟು ಸಮಯ ಸೌಹಾರ್ದದಿಂದ ಬದುಕುವುದನ್ನು ಕಲಿಯಬೇಕು. ಮುಸ್ಲಿಂ ಸಮುದಾಯಕ್ಕೆ ಬೈದರೆ ಪ್ರಮೋಶನ್‌ ಸಿಗದು, ಅಂತಹ ಕನಸು ಕಾಣುವುದು ಬೇಡ. ನಮಗೂ ಮಾತನಾಡಲು ಗೊತ್ತಿದೆ. ಆದರೆ ಕಾಂಗ್ರೆಸ್ಸಿಗರು ಶಾಂತಿ ಪ್ರಿಯರು. ನಿಮ್ಮ ಮಾತಿನ ಮಟ್ಟಕ್ಕೆ ನಾವು ಇಳಿಯುವುದಿಲ್ಲಎಂದು ಶಾಹುಲ… ಹಮೀದ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿಜಿ.ಪಂ. ಸದಸ್ಯ ಯು.ಪಿ. ಇಬ್ರಾಹಿಂ, ಮಾಜಿ ಕಾರ್ಪೊರೇಟರ್‌ ಅಬ್ದುಲ್‌ ರವೂಫ್‌, ಎನ್‌ಎಸ್‌ಯುಐನ ಸವದ್‌ ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

12 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

16 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

16 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

17 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago