ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಬೃಹತ್ ಸಮಾವೇಶ -Vishwanews24
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಮಂಗಳೂರಿನ ಹಲವಡೆಗೆ ಬಿಗಿ ಭದ್ರತೆಯನ್ನು ನಿಯೋಜಿಸಿದೆ.
ಪ್ರತಿಭಟನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಗಳಿದ್ದು, ಕರಾವಳಿಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತರ ಘಟನೆ ನಡೆಯದಂತೆ ಈಗಾಗಪೇ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಭದ್ರೆತೆಗೆ 3 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜನೆಗೊಳಿಸಲಾಗಿದೆ.
ಡಿ.19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದು, ಈ ವೇಳೆ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಯುವಕರಿಬ್ಬರು ಸಾವನ್ನಪ್ಪಿದ್ದರು, ಅಲ್ಲದೆ, ಹಲವರಿಗೆ ಗಾಯಗಳಾಗಿದ್ದವು.
