ಮಂಗಳೂರು : ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಎಪ್ರಿಲ್ 7ರಂದು ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆಯಲ್ಲಿರುವ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ‘ಸಾಮೂಹಿಕ ವಿವಾಹ’ ಸಮಾರಂಭ ಹಮ್ಮಿಕೊಂಡಿದ್ದು, ಆಸಕ್ತ ವಧುವಿನ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, 4 ಪವನ್ ಚಿನ್ನಾಭರಣ ಹಾಗೂ ಮದುವೆಯ ಖರ್ಚನ್ನು ಟ್ರಸ್ಟ್ ಭರಿಸಲಿದೆ. ಅನಾಥ, ಅಂಗವಿಕಲ, ಆರ್ಥಿಕ ಸಂಕಷ್ಟ ಹಾಗೂ ಮದುವೆಯ ವಯಸ್ಸು ಮೀರಿರುವ ವಧುವಿಗೆ ಆಧ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನಾಂಕವಾಗಿದ್ದು, ಆಸಕ್ತರು ನಿಗದಿತ ಅರ್ಜಿ ನಮೂನೆ ಪಡೆಯಲು ಅಲ್ ವಫಾ ಚಾರಿಟೆಬಲ್ ಟ್ರಸ್ಟ್, ಸಿ 24, 2ನೇ ಮಹಡಿ, ಅಲ್ ರಹಬಾ ಪ್ಲಾಝಾ, ಸ್ಟೇಟ್ ಬ್ಯಾಂಕ್ ಬಳಿ, ನೆಲ್ಲಿಕಾಯಿ ರಸ್ತೆ, ಮಂಗಳೂರು – 575001 ದೂರವಾಣಿ ಸಂ. 9845054191ನ್ನು ಸಂಪರ್ಕಿಸಬಹುದು ಎಂದು ಅಲ್ ವಫಾ ಚಾರಿಟೆಬಲ್ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಉಮರ್ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…