ಮಂಗಳೂರು : ಆಸ್ಪತ್ರೆಯಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಆಯಂಬುಲೆನ್ಸ್ನಲ್ಲಿ ಕೊಂಡೊಯ್ಯುತ್ತಿದ್ದಾಗ ಆತ ಕಣ್ಣು ಬಿಟ್ಟು ಉಸಿರಾಡಿದ ಘಟನೆ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ವಾಂತಿಚ್ಚಾಲ್ ನಿವಾಸಿ ಗುರುವ (60) ಎಂಬವರನ್ನು ವಯೋಸಹಜ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗಿಗೆ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿತ್ತು. ರೋಗಿಯು ಆಕ್ಸಿಜನ್ ಸಹಾಯದಿಂದ ಉಸಿರಾಟ ನಡೆಯುತ್ತಿರುವುದರಿಂದ ಆಕ್ಸಿಜನ್ ತೆಗೆದರೆ ಅವರು ಸಾವನ್ನಪ್ಪುತ್ತಾರೆ ಎಂದು ಸಂಬಂಧಿಕರಿಗೆ ತಿಳಿಸಲಾಗಿತ್ತು.
ಅವರು ಬದುಕುವ ಸಾಧ್ಯತೆ ಇಲ್ಲದಿರುವುದರಿಂದ ಆಕ್ಸಿಜನ್ ತೆರವು ಮಾಡಲು ಸಂಬಂಧಿಕರು ತಿಳಿಸಿದಂತೆ ಆಕ್ಸಿಜನ್ ತೆರವು ಮಾಡಲಾಗಿತ್ತು. ಆಕ್ಸಿಜನ್ ತೆಗೆದ ಬಳಿಕ ಮೃತಪಟ್ಟಿದ್ದಾರೆ ಎಂದು ಅವರನ್ನು ಆಯಂಬುಲೆನ್ಸ್ನಲ್ಲಿ ಮನೆಗೆ ಕೊಂಡೊಯ್ಯಲಾಗಿತ್ತು. ಅಂತ್ಯಸಂಸ್ಕಾರಕ್ಕೆ ಚಿತೆ ಸಿದ್ಧ ಮಾಡಲು ಕೂಡ ಸೂಚಿಸಲಾಗಿತ್ತು.
ಆದರೆ, ಆಯಂಬುಲೆನ್ಸ್ನಲ್ಲಿ ಹೋಗುತ್ತಿರುವಾಗ ಕಾಸರಗೋಡು ಜಿಲ್ಲೆಯ ಉಪ್ಪಳ ಎಂಬಲ್ಲಿ ಗುರುವ ಅವರ ದೇಹದಲ್ಲಿ ಚಲನೆ ಕಂಡು ಬಂದಿದೆ. ಕಣ್ಣುಬಿಟ್ಟ ಅವರು ಉಸಿರಾಟ ಆರಂಭಿಸಿದ್ದರು. ಕೂಡಲೇ ಅವರನ್ನು ಬದಿಯಡ್ಕದ ಕ್ಲಿನಿಕ್ಗೆ ಕರೆದೊಯ್ದಾಗ ಆತ ಜೀವಂತವಾಗಿರುವ ಬಗ್ಗೆ ವೈದ್ಯರು ತಿಳಿಸಿದ್ದರು. ಬಳಿಕ ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…