ಮಂಗಳೂರು: ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ಆರೋಪಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲಲ್ಲಿ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ.
ಬೀದರ್ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್ ಹಾಗೂ ಮತ್ತಿತರರು ಸೇರಿ ಮೋಸ ಮಾಡಿದ್ದಾಗಿ ಉಳ್ಳಾಲ ಠಾಣೆಗೆ ದೂರು ನೀಡಿದ್ದರು .
ಮಾರ್ಚ್ 5ರಂದು ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.ಇದೀಗ ಉಳ್ಳಾಲ ಪೊಲೀಸರು ಆರೋಪಿ ಇಫ್ತಿಕರ್ ಅಹ್ಮದ್ ನನ್ನು ಬಾಡಿ ವಾರೆಂಟ್ ಪಡೆದು ಮುಂಬೈನಿಂದ ಮಂಗಳೂರಿಗೆ ಕರೆ ತಂದಿದ್ದಾರೆ. ಈತ ದೇಶಾದ್ಯಂತ ಮೆಡಿಕಲ್ ಸೀಟು ಲಾಬಿಯ ನೆಪದಲ್ಲಿ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಏಜೆನ್ಸಿ ಹೆಸರಲ್ಲಿ ಮೋಸ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…